www.karnatakatv.net: ಹುಬ್ಬಳ್ಳಿ: ನಗರದ ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದ್ದಿಗಳು ಕೈಯಲ್ಲಿ ಸ್ವಚ್ಛತಾ ಸಾಮಗ್ರಿಗಳನ್ನು ಹಿಡಿದುಕೊಂಡು ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದಾರೆ.
ಹೌದು, ವಾಣಿಜ್ಯ ನಗರಿಯಲ್ಲಿ ಇಷ್ಟು ದಿನ ಬಸ್ ನಲ್ಲಿ ಹಾಗೂ ವರ್ಕ್ ಶಾಫ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ ಸಾರಿಗೆ ಇಲಾಖೆಯ ಸಿಬ್ಬಂದಿಗಳು ಇಂದು ಸಾರಿಗೆ ಇಲಾಖೆ ಹಾಗೂ ಎಂ.ಎಸ್.ಎಂ.ಇ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸ್ವಚ್ಚತೆ ಮಾಡುವ ಮೂಲಕ ಸ್ವಚ್ಛ ಭಾರತ ಅಭಿಯಾನದ ಕನಸನ್ನು ನನಸು ಮಾಡಿದ್ದಾರೆ.
ಇನ್ನೂ ಸೂಕ್ಷ್ಮ ಹಾಗೂ ಸಣ್ಣ ಕೈಗಾರಿಕೆಗಳ ಇಲಾಖೆಯ ಸಹಯೋಗದೊಂದಿಗೆ ಇಂತಹದೊಂದು ಕಾರ್ಯಕ್ಕೆ ಮುಂದಾಗಿದ್ದು, ಹೊಸ ಬಸ್ ನಿಲ್ದಾಣದ ಚಿತ್ರಣವೇ ಬದಲಾಗಿದೆ. ಅಲ್ಲದೇ ಎಲ್ಲೆಂದರಲ್ಲಿ ಉಗುಳುವ ಹಾಗೂ ಬೇಕಾಬಿಟ್ಟಿಯಾಗಿ ಕಸ ಚೆಲ್ಲುವವರಲ್ಲಿ ಜಾಗೃತಿ ಮೂಡಿಸಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು. ಅಲ್ಲದೇ ಸಿಬ್ಬಂದಿ ಕೂಡ ಸಾಕಷ್ಟು ಉತ್ಸುಕರಾಗಿ ಸ್ವಚ್ಚತೆ ಮಾಡಿ ಶ್ರಮದಾನ ಮಾಡಿದರು. ಒಟ್ಟಿನಲ್ಲಿ ಸಾರಿಗೆ ಇಲಾಖೆ ಹಾಗೂ ಎಂ.ಎಸ್.ಎಂ.ಇ ಕಾರ್ಯಕ್ಕೆ ಎಲ್ಲೆಡೆಯೂ ಪ್ರಶಂಸೆ ವ್ಯಕ್ತವಾಗಿದ್ದಂತೂ ಸತ್ಯ.
ಕರ್ನಾಟಕ ಟಿವಿ- ಹುಬ್ಬಳ್ಳಿ