ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್ನಲ್ಲಿ ರಾಯಪ್ಪ ಎಂಬುವರು ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಾಯಪ್ಪ ಸರ್ಕಾರದ ವಿರುದ್ಧ ಸ್ಟೇಟಸ್ ಹಾಕಿದ್ದರ ಹಿನ್ನೆಲೆ ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ಇದಕ್ಕೆ ಉತ್ತರ ನೀಡದ ಕಾರಣ ಕ್ಲರ್ಕ್ ರಾಯಪ್ಪನನ್ನು ಅಮಾನತು ಮಾಡಲಾಗಿದೆ.
ಬಂಧಿಸಲು ಹೋದ ಪೋಲೀಸರ ಮೇಲೇ ಹಲ್ಲೆ; ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆರೋಪಿ ಕಾಲಿಗೆ ಗುಂಡು

