Himachala Pradesh News : ಹಿಮಾಚಲ ಪ್ರದೇಶದ ಸೋಲನ್ ಪ್ರದೇಶದಲ್ಲಿ ಮೇಘ ಸ್ಫೋಟ ಸಂಭವಿಸಿ ಭಾರಿ ಅನಾಹುತ ಸಂಭವಿಸಿದೆ. ಸೋಲನ್‌ನ ಕಂದಘಾಟ್‌ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.
ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ನೆರವು ಹಾಗೂ ಬೆಂಬಲವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಹೇಳಿದ್ದಾರೆ.
ಭಾರೀ ಮೆಳೆಯ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುಡ್ಡಗಾಡಿನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು. ಹಾನಿಯ ಕುರಿತು ಪ್ರತಿಕ್ರಿಯೆಗಾಗಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದಾರೆ.
Amith Shah : ‘ದೇಶವನ್ನು ಭದ್ರಪಡಿಸಲು ಸುರಕ್ಷಿತ ಗಡಿ’ : ಮೋದಿ ಕನಸನ್ನು ಉದ್ಘಾಟಿಸಿದ ಅಮಿತ್ ಶಾ….!
Amith Shah : ನೌಕಾಯಾನದ ಮೂಲಕ ಗುಜರಾತ್ ನ ಭದ್ರತಾ ಕೋಟೆ ಮ್ಯಾಪ್ ವೀಕ್ಷಿಸಿದ ಅಮಿತ್ ಶಾ

