Tuesday, July 16, 2024

Latest Posts

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

- Advertisement -

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ಈ ವೇಳೆ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, NDRF ಅಧಿಕಾರಿಗಳು ಉಪಸ್ಥಿತರಿದ್ದರು. ಅಷ್ಟೇ ಅಲ್ಲದೆ ನಾಳೆ BSY ದೆಹಲಿಗೆ ತೆರಳುತ್ತಿದ್ದು, ರಾಜ್ಯದಲ್ಲಿ ಸಂಭವಿಸಿರುವ ಪ್ರವಾಹದ ಬಗ್ಗೆ ಕೇಂದ್ರದ ನಾಯಕರ ಬಳಿ ಚರ್ಚಿಸುವ ಬಗ್ಗೆ ತಿಳಿಸಿದ್ದಾರೆ.

https://www.youtube.com/watch?v=tCyzmBfQrVo
- Advertisement -

Latest Posts

Don't Miss