Monday, December 23, 2024

Latest Posts

ನಾಡಗೀತೆಗೆ ಅವಮಾನ,ಶೀಘ್ರವೇ ಸೂಕ್ತ ತೀರ್ಮಾನಕ್ಕೆ ಅಸ್ತು – ಮುಖ್ಯಮಂತ್ರಿ

- Advertisement -

ಬೆಂಗಳೂರು: ಕುವೆಂಪು ವಿರಚಿತ ನಾಡಗೀತೆಯನ್ನು ತಿರುಚಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಬೇಡಿಕೆ ಕುರಿತು ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ‘ನಿರ್ಮಲಾನಂದನಾಥ ಶ್ರೀಗಳು ಕುವೆಂಪು ಅವರಿಗೆ ಸಂಬಂಧಿಸಿದಂತೆ ಗಂಭೀರವಾದ ವಿಚಾರವನ್ನು ಮುಂದಿಟ್ಟಿದ್ದಾರೆ. ಆ ಕುರಿತು ಶಿಕ್ಷಣ ಸಚಿವರ ಜತೆ ಸಭೆ ನಡೆಸಿ ನಂತರ ತೀರ್ಮಾನಿಸಿ ಸೂಕ್ತ ಕೈಗೊಳ್ಳಲಾಗುವುದು’ ಎಂದರು.

ಕುವೆಂಪು ಮತ್ತು ನಾಡಗೀತೆಯನ್ನು ನಿಂದಿಸಿದವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹಿಸಿದ್ದಾರೆ.

 

- Advertisement -

Latest Posts

Don't Miss