ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಹೆಸರು – ಸಿಎಂ ಬೊಮ್ಮಾಯಿ ಘೋಷಣೆ

ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರಿಡಲಾಗುತ್ತಿದೆ. ಈ ಬಗ್ಗೆ ವಿಮಾನ ಸಚಿವಾಲಯಕ್ಕೆ ಅನುಮೋದನೆಗಾಗಿ ಕಳುಹಿಸಿಕೊಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರಿಡಲು ಸಚಿವ ಸಂಪುಟ ತೀರ್ಮಾನಿಸಿ, ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಕೇಂದ್ರದಿಂದ ಇದು ಅನುಮೋದನೆಗೊಂಡು ಬರಲಿದೆ ಎಂದು ಹೇಳಿದರು.

ಯಡಿಯೂರಪ್ಪನವರ ಶ್ರಮ ಮತ್ತು ಆಸಕ್ತಿ ಈ ವಿಮಾನ ನಿಲ್ದಾಣ ರಚನೆಯಲ್ಲಿದೆ. ಹೀಗಾಗಿ ಅವರ ಹೆಸರನ್ನ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತಿದೆ ಎಂದು ತಿಳಿಸಿದರು.

About The Author