Saturday, July 27, 2024

Latest Posts

ಎಲ್ಲರೂ ಸೇರಿ ಕೋವಿಡ್ ವಿರುದ್ಧ ಹೊರಾಡೋಣ : ಸಿಎಂ ಬಸವರಾಜ ಬೊಮ್ಮಾಯಿ

- Advertisement -

ಹುಬ್ಬಳ್ಳಿ: ಕೊರೊನಾ ಬಗ್ಗೆ ಹೆದರಿಕೆ ಬೇಡ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಬಗ್ಗೆ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಭೆ ನಡೆಸಲಿದ್ದು, ಬೋಸ್ಟರ್ ಡೋಸ್ ಗಳನ್ನು ಕೊಡಲು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಬಿರಗಳನ್ನು ಏರ್ಪಡಿಸುವುದು, ಪರೀಕ್ಷೆಗಳನ್ನು ನಡೆಸುವುದು, ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಮುಂತಾದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಯೂರಿಕ್ ಆಮ್ಲವನ್ನು ನಿಯಂತ್ರಿಸಲು ಈ ಆಹಾರಗಳನ್ನು ಬಳಸಿ : ಕೆಲವೇ ದಿನಗಳಲ್ಲಿ ರಿಸಲ್ಟ್ ನಿಮಗೆ ತಿಳಿಯುತ್ತದೆ..!

ಇನ್ನು ಆರೋಗ್ಯ ಮೂಲಸೌಕರ್ಯ ಗಳಾದ ಔಷಧಿ, ಲಸಿಕೆ ಇವೆಲ್ಲವನ್ನೂ ದಾಸ್ತಾನು ಮಾಡಿಕೊಳ್ಳಲು ಕ್ರಮ ವಹಿಸಬೇಕು, ಯಾವುದೇ ಸಂದರ್ಭದಲ್ಲಿ ಯಾವುದೇ ಕೊರತೆಯಾಗಬಾರದು, ಆಮ್ಲಜನಕ ಘಟಕಗಳನ್ನು ಡ್ರೈ ರನ್ ಮಾಡಿ ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ. ವಿಮಾನ ನಿಲ್ದಾಣದಲ್ಲಿಯೂ ನಿರಂತರವಾಗಿ ನಿಗಾ ವಹಿಸಿ, ನಿರ್ಬಂಧಗಳನ್ನು ಹೇರಲಾಗಿದೆ. ಎಲ್ಲರೂ ಸೇರಿ ಇದರ ವಿರುದ್ಧ ಹೊರಾಡೋಣ ಹಾಗೂ ಹೊಸ ವರ್ಷಾಚರಣೆಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ತಿಳಿಸಿದರು.

ಕೂದಲಿನ ಸಮಸ್ಯೆಗಳನ್ನು ಹೋಗಲಾಡಿಸಲು ಕಾಫಿಯನ್ನು ಹೇಗೆ ಬಳಸಬೇಕು ಎಂಬುದನ್ನು ತಿಳಿಯೋಣ ಬನ್ನಿ..!

ಒಂದು ಶ್ರೇಣಿಯ ಒಂದು ಪಿಂಚಣಿಗೆ ಕೇಂದ್ರ ಅನುಮೋದನೆ

- Advertisement -

Latest Posts

Don't Miss