ಪಂಚಮಸಾಲಿ ಸಮುದಾಯದಿಂದ 2ಎ ಪ್ರವರ್ಗದಡಿ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿಯಲ್ಲಿ ಬೃಹತ್ ಪಾದಯಾತ್ರೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಇಂದು ಕರ್ನಾಟಕ ರಾಜ್ಯ ಖಾಯಂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ಪಂಚಮಸಾಲಿ ಸಮುದಾಯ ಪ್ರಸ್ತುತ 3B ವರ್ಗದಲ್ಲಿ ಇದ್ದು, ಇಲ್ಲಿ ಅವರು ಶೇಕಡಾ 5 ರಷ್ಟು ಮೀಸಲಾತಿಯನ್ನು ಪಡೆಯುತ್ತಿದ್ದಾರೆ. ಆದರೆ 15% ಮೀಸಲಾತಿಯನ್ನು ಖಾತರಿಪಡಿಸುವ ಇತರ ಹಿಂದುಳಿದ ವರ್ಗಗಳ 2ಎ ಪ್ರವರ್ಗದಡಿ ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ.
ರಸ್ತೆಯಲ್ಲಿ ನಿಂತಿದ್ದ ಒಂಟಿ ಸಲಗ ನೋಡಿ ಬೈಕ್ ಸವಾರ ಶಾಕ್
ಡಿಸೆಂಬರ್ 19 ರಂದು ಅಧಿವೇಶನ ಪ್ರಾರಂಭವಾಗುವ ಮೊದಲು ಆಯೋಗ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಆದರೆ, ಆಯೋಗ ಗುರುವಾರ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಒಬಿಸಿ ಆಯೋಗದ ವರದಿ ನಂತರ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವೀರಶೈವ ಲಿಂಗಾಯತರ ಪ್ರಬಲ ಉಪಪಂಗಡಗಳಲ್ಲಿ ಒಂದಾದ ಪಂಚಮಸಾಲಿ ಸಮಾಜದವರು ಮೀಸಲಾತಿಗಾಗಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಬೆಳಗಾವಿಯ ಸುವರ್ಣ ಸೌಧದಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದರು. ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿರುವ ಸಮುದಾಯದವರು ಇಂದೇ ಮೀಸಲಾತಿ ಪ್ರಕಟಿಸುವಂತೆ ಸಿಎಂಗೆ ಗಡುವು ನೀಡಿದ್ದಾರೆ. ಇಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ನಡೆಯುತ್ತಿದ್ದು. ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲು ಸಜ್ಜಾಗಿದ್ದೆ.