ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕೆನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ಕುಸಿದಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ ನೀರಿನ ಪೈಪ್ ಸೋರಿಕೆಯಿಂದ ರಸ್ತೆ ಕುಸಿದಿರುವುದು ಕಂಡು ಬಂದಿದೆ.




