ಇಂದು ಸಂಜೆ ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ ಪಯಣ

ಬೆಂಗಳೂರು: ಇಂದು ಸಂಜೆ ಬೆಂಗಳೂರಿನಿಂದ ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಯಣ ಬೆಳೆಸಲಿದ್ದಾರೆ. ನಾಳೆ ನಡೆಯಲಿರುವಂತ ನ್ಯಾಯಾಧೀಶರು, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿ, ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಜಡ್ಜ್ ಗಳು, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿಯಾಗೋದಾಗಿ ತಿಳಿಸಿದರು.

ಬೆಂಗಳೂರಿಗೆ ಭಾನುವಾರ ಬೆಳಿಗ್ಗೆ ಬರುತ್ತೇನೆ. ದೆಹಲಿಯ ಪ್ರವಾಸದಲ್ಲಿ ಯಾವುದೇ ಕೇಂದ್ರ ಸಚಿವರನ್ನು, ಪಕ್ಷದ ನಾಯಕರನ್ನು ಭೇಟಿ ಮಾಡುತ್ತಿಲ್ಲ. ರಾಜ್ಯಕ್ಕೆ ಮೇ.3ರಂದು ಅಮಿತ್ ಶಾ ಆಗಮಿಸಲಿದ್ದಾರೆ. ಆ ಸಂದರ್ಭದಲ್ಲಿ ಅವರೊಂದಿಗೆ ಚರ್ಚಿಸಿ, ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನಿಸೋದಾಗಿ ಹೇಳಿದರು.

About The Author