- Advertisement -
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನದ ಬಳಿಕ ಮಣಿಪಾಲ್ ಆಸ್ಪತ್ರೆಗೆ ತೆರಳಲಿದ್ದು, ಆರೋಗ್ಯ ತಪಾಸಣೆ ಮಾಡಿಸಲಿದ್ದಾರೆ.
ರವಿವಾರ ರಕ್ತ ಪರೀಕ್ಷೆಗೆ ಒಳಗಾಗಿದ್ದ ಸಿಎಂ ಬೊಮ್ಮಾಯಿ ಅವರು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿ ಒಂದು ವಾರ ಕಳೆದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಮತ್ತೊಮ್ಮೆ ಟೆಸ್ಟ್ ಮಾಡಿಸಲಿದ್ದಾರೆ. ಸದ್ಯ ರೋಗದ ಯಾವುದೇ ಗುಣಲಕ್ಷಣಗಳಿಲ್ಲದೇ ಸಿಎಂ ಮನೆಯಿಂದಲೇ ಕಾರ್ಯಚಟುವಟಿಕೆ ನಡೆಸುತ್ತಿದ್ದಾರೆ.
ಕೋವಿಡ್ ನೆಗಟಿವ್ ವರದಿ ಬಂದರೆ ಸಿಎಂ ಬಹಿರಂಗವಾಗಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಸದ್ಯ ಆರ್ ಟಿ ನಗರ ನಿವಾಸದಲ್ಲಿ ವೀಡಿಯೋ ಕಾನ್ಪೆರೆನ್ಸ್ ಮೂಲಕ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.
- Advertisement -