Sunday, September 8, 2024

Latest Posts

ಗುಜರಾತ್ ನ 18ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ

- Advertisement -

ಇಂದು ಗಾಂಧಿನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಗುಜರಾತ್ನ 18ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾರತೀಯ ಜನತಾ ಪಕ್ಷದ ನಾಯಕ ಭೂಪೇಂದ್ರ ಪಟೇಲ್ ಅವರು ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದಾರೆ. ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ಭೂಪೇಂದ್ರ ಪಟೇಲ್ ಗುಜರಾತ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.

ಹಾಸನದ ಶ್ರೀನಗರಕ್ಕೆ ರಾತ್ರಿ ಶಾಸಕ ಪ್ರೀತಂಗೌಡ ಭೇಟಿ

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಪ್ರಮುಖ ನಾಯಕರು, ಕೇಂದ್ರ ಸಚಿವರು ಮತ್ತು ಪಕ್ಷ ಆಳುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಚುನಾವಣೆಯಲ್ಲಿ ಪಟೇಲ್ ಘಟ್ಲೋಡಿಯಾ ಕ್ಷೇತ್ರದಲ್ಲಿ 1.92 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದರು.ಇತ್ತೀಚೆಗಷ್ಟೇ ಮುಕ್ತಾಯಗೊಂಡ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ 156 ಸ್ಥಾನಗಳನ್ನು ಗೆದ್ದುಕೊಂಡಿದೆ.

ಕಾಂತರಕ್ಕೆ ಹೃತಿಕ್‌ ರೋಷನ್‌ ಬಹುಪರಾಕ್..!!

ಚಿರತೆ ದಾಳಿಗೆ 3 ಮೇಕೆಗಳು ಬಲಿ

- Advertisement -

Latest Posts

Don't Miss