Thursday, December 12, 2024

Latest Posts

CM Bommai : ಸೋಮವಾರದಿಂದ ಮೊದಲನೆ ಹಂತದಲ್ಲಿ 10ರ ತರಗತಿಗಳು ಪ್ರಾರಂಭ..!

- Advertisement -

ಹಿಜಾಬ್ ವಿವಾದ (Hijab Controversy) ಕುರಿತಂತೆ ಹೈಕೋರ್ಟ್(High Court) ನಲ್ಲಿ ವಿಚಾರಣೆ ನಡೆಯುತ್ತಿದ್ದು, ಹೈಕೋರ್ಟ್ ನ ಏಕ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Justice Krishna S Dixit) ಅವರು ವಾದ-ಪ್ರತಿವಾದಗಳನ್ನು ಕೇಳಿದ ನಂತರ ಈ ವಿಚಾರ ಧರ್ಮ ಸೂಕ್ಷ್ಮವಾದ ವಿಚಾರವಾಗಿದ್ದು ಇದನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ನಡೆಸಿದ್ದರು. ಇಂದು ಹೈಕೋರ್ಟ್ ನ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿದ್ದು, ವಿವಾದ ಇತ್ಯರ್ಥವಾಗುವವರೆಗೂ ಯಾರು ಸಹ ಧರ್ಮಗಳ ಗುರುತುಗಳನ್ನು ಬಳಸುವಂತಿಲ್ಲ ಎಂದು ಮಧ್ಯಂತರ ಆದೇಶ ಹೊರಡಿಸಿದ್ದು, ಇದಕ್ಕಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಾಲೆಗಳನ್ನು ಶೀಘ್ರವಾಗಿ ಆರಂಭಿಸಲು ಸರ್ಕಾರಕ್ಕೆ (government) ಸೂಚನೆಯನ್ನು ನೀಡಿದೆ. ಈ ಕುರಿತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಂಜೆ 6 ಗಂಟೆಗೆ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು. ಸಭೆಯ ನಂತರ ಮಾತನಾಡಿದ ಅವರು ಮೊದಲನೆಯ ಹಂತದಲ್ಲಿ ಸೋಮವಾರದಿಂದ ಹತ್ತನೇ ತರಗತಿಗಳು ಆರಂಭಿಸುವಂತೆ ತಿಳಿಸಿದ್ದಾರೆ. ಇನ್ನು ಎರಡನೇ ಹಂತದಲ್ಲಿ ಪಿಯು ತರಗತಿಗಳನ್ನು ಆರಂಭಿಸುತ್ತೇವೆ, ಈ ಕುರಿತು ನಾಳೆ ಸಂಜೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ (Video Conference) ಮೂಲಕ ಸಭೆ ನಡೆಸುತ್ತೇವೆ, ಸಭೆಯಲ್ಲಿ ಜಿಲ್ಲೆಗಳ ಪರಿಸ್ಥಿತಿಯ ಬಗ್ಗೆ ತಿಳಿಯಲಾಗುವುದು, ಎಲ್ಲಾ ಅಧಿಕಾರಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುತ್ತದೆ ಎಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಸಿಎಂ ಬೊಮ್ಮಾಯಿ (CM Bommai) ತಿಳಿಸಿದ್ದಾರೆ. ಎರಡು ದಿನಗಳಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿಲ್ಲ, ಇನ್ನು ಮುಂದೆಯೂ ಸಂಭವಿಸಿದಂತೆ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಇನ್ನು ಈ ಸಭೆಯಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ(Araga Jnanendra), ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ, ಶಿಕ್ಷಣ ಸಚಿವ ಬಿಸಿ ನಾಗೇಶ್, ಅಧಿಕಾರಿಗಳು ಸೇರಿದಂತೆ ಹಲವರು ಈ ಮಹತ್ವದ ಸಭೆಯಲ್ಲಿ ಭಾಗವಹಿಸಿದ್ದರು.

- Advertisement -

Latest Posts

Don't Miss