- Advertisement -
ಬೆಂಗಳೂರು : ಬಾಗಲಕೋಟೆಯ ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬುದ್ನಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಪ್ರತಿಮ ದೇಶಭಕ್ತ ಹಾಗೂ ಅಪ್ಪಟ ಗಾಂಧೀವಾದಿ ಯಾಗಿದ್ದ ಬುದ್ನಿ ಅವರು ವಿನೋಬಾ ಭಾವೆಯವರ ಕಟ್ಟಾ ಅನುಯಾಯಿ ಆಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಮ್ಮ ಶೋಕ ಸಂದೇಶ ದಲ್ಲಿ ತಿಳಿಸಿದ್ದಾರೆ.
- Advertisement -