ಬೆಂಗಳೂರು: ರಾಜ್ಯಾಧ್ಯಂತ ಕಳೆದ ಎರಡು ಮೂರು ದಿನಗಳಿಂದ ಸುರಿದಂತ ಭಾರೀ ಮಳೆಯಿಂದಾಗಿ ರಾಜ್ಯ ಅನೇಕ ಕಡೆಯಲ್ಲಿ ದೊಡ್ಡ ಅವಾಂತರವನ್ನೇ ಸೃಷ್ಠಿಸಿದೆ. ಈ ಹಿನ್ನಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿಯವರು ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಹೌದು.. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ 3:00 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಹಾಗೂ ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಅವಾಂತರ ಕುರಿತು ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಈ ಮೂಲಕ ಭಾರೀ ಮಳೆಯಿಂದ ಉಂಟಾಗಿರುವಂತ ಹಾನಿಯ ಕುರಿತು ಮಾಹಿತಿ ಪಡೆಯಲಿದ್ದಾರೆ.




