ಜಿ.ಎಸ್.ಟಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ದೆಹಲಿಯಲ್ಲಿ ಇಂದು ನಡೆಯಲಿರುವ ಜಿ.ಎಸ್.ಟಿ ಸಚಿವರ ಮಂಡಳಿ (ಗ್ರೂಪ್ ಆಫ್ ಮಿನಿಸ್ಟರ್ಸ್) ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದು, ಇಂದು ಸಂಜೆಯೇ ಹಿಂದಿರುಗುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದೆಹಲಿಗೆ ತೆರಳುವ ಮುನ್ನ ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಭಾವನದಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ದೆಹಲಿಯಲ್ಲಿ ಯಾರನ್ನೂ ಭೇಟಿಯಾಗುವ ಉದ್ದೇಶ ಇಲ್ಲ. ಇದೊಂದು ಅಲ್ಪಾವಧಿ ಭೇಟಿ ಎಂದರು.

About The Author