Saturday, April 19, 2025

Latest Posts

ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಸಿಎಂ ಬೊಮ್ಮಾಯಿ: ಕುತೂಹಲ ಮೂಡಿಸಿದ ಸಿಎಂ ಭೇಟಿ

- Advertisement -

ಬೆಂಗಳೂರು: ರಾಜ್ಯದಲ್ಲಿ ಸರಣಿ ಟ್ವಿಟ್ ಮೂಲಕ ಕಾಂಗ್ರೆಸ್ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಮೂರನೇ ಸಿಎಂ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಡುತ್ತಿದೆ. ಆದ್ರೇ.. ಬಿಜೆಪಿಯ ನಾಯಕರು ಸಹಿತ, ರಾಜ್ಯ ಉಸ್ತುವಾರಿಗಳು ಕೂಡ ಸಿಎಂ ಬದಲಾವಣೆ ಇಲ್ಲವೇ ಇಲ್ಲ ಎಂಬುದಾಗಿ ಹೇಳುತ್ತಿದ್ದಾರೆ. ಈ ನಡುವೆ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಬೊಮ್ಮಾಯಿ ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ.

ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತೆರಳಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಸಿಎಂ ಬದಲಾವಣೆ ಚರ್ಚೆಯ ಬೆನ್ನಲ್ಲೇ, ಮಾಜಿ ಸಿಎಂ – ಹಾಲಿ ಸಿಎಂ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ಸಿಎಂ ಬೊಮ್ಮಾಯಿ, ತಮ್ಮ ಬದಲಾವಣೆಯನ್ನು ತಡೆಯೋ ಸಂಬಂಧ ಮಾಜಿ ಸಿಎಂ ಬಿಎಸ್ ವೈ ಜೊತೆಗೆ ಚರ್ಚೆ ನಡೆಸಿದ್ರಾ ಎನ್ನುವ ಕುತೂಹಲಕ್ಕೂ ಕಾರಣವಾಗಿದೆ. ಅಲ್ಲದೇ ಸಿಎಂ ಬದಲಾವಣೆ ಬಗ್ಗೆ ರಾಜ್ಯದಲ್ಲಿ ತೀವ್ರ ಚರ್ಚೆಯಾಗುತ್ತಿರೋ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಯಡಿಯೂರಪ್ಪ ಭೇಟಿ ಮಾಡಿದ್ದು ಯಾಕೆ ಎನ್ನುವ ಪ್ರಶ್ನೆಯನ್ನು ಹುಟ್ಟು ಹಾಕಿದೆ.

- Advertisement -

Latest Posts

Don't Miss