Banglore News:
ಬೆಂಗಳೂರು, ಜನವರಿ 12: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೇರು ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ದೇಶದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 57 ನೇ ಪುಣ್ಯ ತಿಥಿಯ ಅಂಗವಾಗಿ ಅವಾರ ಪ್ರತಿಮೆಗೆ ಮಾಲಾರ್ಪಣೆ. ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ದುರಂತ ಸಾವು
ದೇಶ ಕಂಡ ಅತ್ಯಂತ ಪ್ರಭಾವಶಾಲಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 57 ನೇ ಪುಣ್ಯ ತಿಥಿ ಆಚರಣೆ ಮಾಡಲಾಗುತ್ತಿದೆ. ಅವರ ಸಾವು ಒಂದು ದುರಂತ. ಅವರು ಪಾಕಿಸ್ತಾನದ ಮೇಲೆ ಗೆದ್ದ ಯುದ್ಧದ ಶಾಂತಿಯ ಸಲುವಾಗಿ ರಷ್ಯಾದ ತಾಷ್ಕೆಂಟ್ ಗೆ ತೆರಳಿದಾಗ ಅವರ ಸಾವೇಗೀಡಾದರು. ಅವರ ಸಾವಿನ ಬಗ್ಗೆ ಸಾಕಷ್ಟು ಸಂಶಯಗಳು ವ್ಯಕ್ತವಾಗಿವೆ. ಆದರೆ ವಿದೇಶಕ್ಕೆ ದೇಶದ ಕೆಲಸಕ್ಕಾಗಿ, ಶಾಂತಿಗಾಗಿ ತೆರಳಿದ ಸಂದರ್ಭದಲ್ಲಿ ಮರಣ ಹೊಂದಿದ್ದು, ಭಾರತಕ್ಕೆ ದೊಡ್ಡ ಆಘಾತವುಂಟು ಮಾಡಿತ್ತು ಎಂದರು.
ನ್ಯಾಯನಿಷ್ಠುರ ಆಡಳಿತ
ಅತ್ಯಂತ ಬಡ ಕುಟುಂಬದಿಂದ ಬಂದು, ಸರಳವಾಗಿ ಬದುಕು ನಡೆಸಿದವರು. ಬಡತನದ ಬಗ್ಗೆ ಎಂದೂ ಕೀಳರಿಮೆ ಹೊಂದಿರಲಿಲ್ಲ. ಶ್ರೀಮಂತರಾಗಬೇಕೆಂಬ ಹಂಬಲವೂ ಇರಲಿಲ್ಲ. ನ್ಯಾಯನಿಷ್ಠುರರಾಗಿ, ಸತ್ಯದಿಂದ ಆಡಳಿತ ಮಾಡಿ , ನಮ್ಮೆಲ್ಲರಿಗೂ ಆದರ್ಶಪ್ರಾಯರು. ಅವರಿನ್ನೂ ಹೆಚ್ಚಿನ ಕಾಲ ಬದುಕಬೇಕಿತ್ತು. ಈ ದೇಶವನ್ನು ಆಳಿ, ಒಳ್ಳೆಯ ಸತ್ಸಂಪ್ರದಾಯವನ್ನು ಹಾಕಿಕೊಡುತ್ತಿದ್ದರು ಎನ್ನುವ ವಿಶ್ವಾಸವಿತ್ತು. ಅವರ ಜೀವನ ಇಂದಿಗೂ ಆದರ್ಶ ಪ್ರೇರಣೆ ನೀಡುವಂಥದ್ದು. ಅವರನ್ನು ಸ್ಮರಿಸುವ ಮೂಲಕ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಅವರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಸಬೇಕು. ಜೈ ಜವಾನ್, ಜೈ ಕಿಸಾನ್, ಅವರ ಅತ್ಯಂತ ಮಹತ್ವದ ಕೊಡುಗೆ. ಒಂದು ದೇಶದ ಸುರಕ್ಷತೆ, ಅಭಿವೃದ್ಧಿ, ಸ್ವಾವಲಂಬನೆ ಮತ್ತು ಸ್ವಾಭಿಮಾನ ಎಲ್ಲವೂ ಅವರು ನೀಡಿದ ಘೋಷವಾಕ್ಯದಲ್ಲಿದೆ. ಇಂದಿಗೂ ಈ ಘೋಷವಾಕ್ಯ ದೇಶದ ಅಭಿವೃದ್ಧಿಗೆ ಅಗತ್ಯ ಎಂದರು.
ಮೆಟ್ರೋ ದುರಂತ
ಮೆಟ್ರೋ ಪಿಲ್ಲರ್ ದುರಂತಕ್ಕೆ ಸಂಬಂಧಿಸಿದಂತೆ ಉತ್ತರಿಸಿ ನಿನ್ನೆ ಮರಣೋತ್ತರ ಪರೀಕ್ಷೆ, ಯಥಾಸ್ಥಿತಿಗೆ ತರುವ ಕಾರ್ಯಗಳಾಗಿದ್ದು, ಇಂದು ಪ್ರಕರಣ ಸಂಬಂಧಿಸಿದಂತೆ ಹೆಸರುಗಳನ್ನು ಇಂದು ಬಿಡುಗಡೆ ಮಾಡಲಾಗುವುದು ಎಂದರು.
ಆರೋಪಪಟ್ಟಿ ಆಧಾರವಿಲ್ಲದ್ದು
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಡುಗಡೆ ಮಾಡಿರುವ ಚಾರ್ಚ್ ಶೀಟ್ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಆರೋಪಪಟ್ಟಿಯ ವಿಷಯಗಳನ್ನು ನೋಡಿದರೆ ಯಾವುದೇ ಆಧಾರವಿಲ್ಲದ್ದು. ನಾವು ಈ ಹಿಂದೆ ಆರೋಪಪಟ್ಟಿ ಅವರ ಮೇಲೆ ಬಿಡುಗಡೆ ಮಾಡಿದ್ದೆವು. ಅದಕ್ಕಿನ್ನೂ ಉತ್ತರ ನೀಡಿಲ್ಲ. ಮೊದಲು ಅವರ ಕಾಲದ ಕರ್ಮಕಾಂಡಗಳ ಬಗ್ಗೆ ಉತ್ತರ ಹೇಳಲಿ. ಬರುವ ದಿನಗಲ್ಲಿ ಇನ್ನಷ್ಟು ಚಾರ್ಜ್ ಶೀಟ್ ಗಳು ಬರಲಿವೆ ಎಂದರು.ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಜನರ ಸಾಂಸ್ಕೃತಿಕ ಕಾರ್ಯಕ್ರಗಳು ಹಾಗೂ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರ 3.24 ಗುಂಟೆ ಜಮೀನು ಮಂಜೂರು ಮಾಡಿದ್ದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ಅವರ ಸಚಿವ ಸಂಪುಟದ ಸದಸ್ಯರಿಗೆ ಅಭಿನಂದನೆ ಸಲ್ಲಿಸಲು ಗೌರವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಉತ್ತರ ಕರ್ನಾಟಕ ಉತ್ಸವ ಲೋಗೊ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಆಡಳಿತ ಪಕ್ಷಕ್ಕೆ ತಲೆನೋವಾದ ಮೆಟ್ರೋ ದುರಂತ..! ರಾಜಿನಾಮೆ ನೀಡ್ತಾರಾ ಸಿಎಂ..?!