ಇಂದಿನಿಂದ ಮೋದಿ ಕರೆಯಂತೆ 3 ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾಣ ದೇಶದೆಲ್ಲೆಡೆ ನಡೆಯಲಿದೆ.ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ತಮ್ಮ ನಿವಾಸದಲ್ಲಿ ಧ್ವಜಾರೋಹಣ ಮಾಡಿ ಹರ್ ಘರ್ ತಿರಂಗಾ ಅಭಿಯಾಣಕ್ಕೆ ಚಾಲನೆ ನೀಡಿದರು.
ಹರ್ ಘರ್ ತಿರಂಗಾ ಅಭಿಯಾನ ದೇಶದೆಲ್ಲೆಡೆ ನಿರಂತರ ನಡೆಯುತ್ತಿದೆ. ಈ ಹಿನ್ನೆಲೆ ಬಸವರಾಜ ಬೊಮ್ಮಾಯಿ ತಮ್ಮ ಬೆಂಗಳೂರು ಆರ್.ಟಿ.ನಗರದಲ್ಲಿರುವ ನಿವಾಸದಲ್ಲಿ ಅವರು ಧ್ವಜಾರೋಹಣ ನೆರವೇರಿಸಿದರು., ಧ್ವಜಾರೋಹಣ ಸಂದರ್ಭ ಸಿಎಂ ಪತ್ನಿ, ಮಗ ಮತ್ತು ಆರೋಗ್ಯ ಸಚಿವ ಸುಧಾಕರ್ ಇದ್ದರು. ಧ್ವಜರಾರೋಹಣದ ವೇಳೆ ರಾಷ್ಟ್ರಗೀತೆ ಹಾಡಲಾಗಿತ್ತು.
ಧ್ವಜಾರೋಹಣ ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದಿನಿಂದ ದೇಶದೆಲ್ಲೆಡೆ ಹರ್ ಘರ್ ತಿರಂಗಾ ನಡೆಯಲಿದೆ. ರಾಜ್ಯದಲ್ಲಿ ಹರ್ ಘರ್ ತಿರಂಗ ಯಶಸ್ವಿಗೊಳಿಸಲು ಎಲ್ಲ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲ ಗ್ರಾಮ ಪಂಚಾಯಿತಿಗಳಿಗೂ ಧ್ವಜ ವಿತರಣೆ ಮಾಡಲಾಗಿದೆ. ಈಗಾಗಲೇ 1 ಕೋಟಿ 8 ಲಕ್ಷ ಧ್ವಜಗಳನ್ನು ವಿತರಿಸಿದ್ದೇವೆ. ರಾಜ್ಯದಲ್ಲಿ 1.20 ಕೋಟಿಗೂ ಹೆಚ್ಚು ಕಡೆ ತಿರಂಗಾ ಹಾರಿಸಲಾಗುತ್ತದೆ ಎಂದರು.