Tuesday, March 11, 2025

Latest Posts

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅಗಲಿಕೆಗೆ ಕಂಬನಿ ಮಿಡಿದ ಸಿಎಂ ಬೊಮ್ಮಾಯಿ

- Advertisement -

Banglore News:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಬೆಂಗಳೂರಿನಲ್ಲಿ ಇಂದು (ಆ 22) ಮುಂಜಾನೆ ನಿಧನರಾಗಿದ್ದು, ಇವರ ಅಗಲಿಕೆಗೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ” ಆತ್ಮೀಯ ಕಿರಿಯ ಮಿತ್ರ, ಕಳೆದ ಹಲವಾರು ವರ್ಷಗಳಿಂದ ನನ್ನ ಜೊತೆ ಒಡನಾಟ ಹೊಂದಿ, ನನ್ನ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ ಗುರುಲಿಂಗಸ್ವಾಮಿ ಹೊಳಿಮಠ ಅವರು ಇಂದು ಅಕಾಲಿಕ ನಿಧನರಾದ ವಿಷಯ ತಿಳಿದು ತೀವ್ರ ಆಘಾತ ಹಾಗೂ ದುಃಖಿತನಾಗಿದ್ದೇನೆ ” ಎಂದು ಸಂತಾಪ ಸೂಚಿಸಿದ್ದಾರೆ.

ನಿನ್ನೆ ಎಂಟು ಗಂಟೆಗೆ ಮನೆಗೆ ಹೋಗುತ್ತೇನೆ ಅಂದಿದ್ದರು. ಬೆಳಗ್ಗೆ ಎದ್ದು ಇಂತಹ ಸುದ್ದಿ ಬರುತ್ತೆ ಅಂತ ಅನಿಸಿರಲಿಲ್ಲ. ಇದು ದುಃಖಕರ ಸಂಗತಿ. ನಾಗರಾಜ್ ಜಮಖಂಡಿ ಜೊತೆ ಜೊತೆಯಲ್ಲೇ ಇವನು ಹೋದ. ಪ್ರತೀ ವರ್ಷ ಜಮಖಂಡಿ ಅವರ ಕಾರ್ಯಕ್ರಮ ಇವನೇ ನಿಂತು ಮಾಡುತ್ತಿದ್ದರು. ಅವನ ಕ್ರಿಯಾಶೀಲ ಇತರರಿಗೂ ಮಾದರಿಯಾಗಲಿ. ಅವನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೋಳಿಮಠ ಅವರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆಗೆ ಹುಟ್ಟುರಾದ ಬೆಳಗಾವಿ ಜಿಲ್ಲೆಯ ರಾಮದುಗ೯ ಪಟ್ಟಣದಲ್ಲಿ ನಡೆಯಲಿದೆ.

 

- Advertisement -

Latest Posts

Don't Miss