Thursday, December 12, 2024

Latest Posts

ಇಂದು ಮುಖ್ಯಮಂತ್ರಿಯವರಿಂದ ಅಂಗಾಂಗ ದಾನಕ್ಕೆ ಹೆಸರು ನೋಂದಣಿ

- Advertisement -

ರಾಜ್ಯಾಂದ್ಯ ವಿಶ್ವ ಅಂಗಾಂಗ ದಿನಾಚರಣೆಯನ್ನು ಇಂದು[ಅ.13] ಆಚರಿಸಲಾಗುತ್ತಿದೆ , ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹಾಗು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇನ್ನಿತರರು ಕೂಡ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ.

ಇದಕ್ಕೂ ಮುನ್ನ ನಡೆಯಲಿರುವ ಜಾಗೃತಿ ಕಾರ್ಯಕ್ರಮದ ರ್ಯಾಲಿ ಮೇಖ್ರಿ ಸರ್ಕಲ್‌ನಿಂದ ಆರಂಭವಾಗಿ ಫ್ರೀಡಂಪಾರ್ಕ್ ಮೂಲಕ ಹಾದುಹೋಗಿ ವಿಧಾನಸೌಧಕ್ಕೆ ತಲುಪಲಿದೆ. ವಿಧಾನಸೌಧದಲ್ಲಿ ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನ ಮಾಡಲಿದ್ದಾರೆ.ಬಳಿಕ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ ಎರಂದು ಹೇಳಲಾಗಿದೆ. ಅಷ್ಟೇ ಅಲ್ಲದೆ ತ್ರಿಪುರ ವಾಸಿನಿಯಲ್ಲಿ ಆರೋಗ್ಯ ಕ್ಷೇತ್ರದ ಹಲವರು ಮೂತ್ರಪಿಂಡದ ಆಕಾರದಲ್ಲಿ ನಿಂತುಕೊಂಡು ಜಾಗೃತಿ ಮೂಡಿಸಲಾಗುತ್ತದೆ. ಈಗಾಗಲೇ ಸಾವಿರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂದಾಗಿದ್ದಾರೆ.

- Advertisement -

Latest Posts

Don't Miss