www.karnatakatv.net: ಬೆಂಗಳೂರು: ಸಿಎಂ ಬೊಮ್ಮಾಯಿ 3 ದಿನಗಳ ಕಾಲ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.
ಹೌದು,ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆಗೆ ಕ್ರಮಕ್ಕೆ ಒತ್ತಾಯ, ಸಕ್ಕರೆ ಆಯುಕ್ತಾಲಯ ಕಚೇರಿ ಬೆಳಗಾವಿಗೆ ಸ್ಥಳಾಂತರಿಸಲು ಆಗ್ರಹ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಒತ್ತಾಯಿಸಿ ರೈತರು ಧರಣಿ ನಡೆಸಲಿದ್ದಾರೆ. ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಸುಮಾರು 200ಕ್ಕೂ ಅಧಿಕ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದ್ದು, ಬೆಳಗ್ಗೆ ೧೧ಕ್ಕೆ ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸಿಎಂ ಗಮನ ಸೆಳೆಯುವ ನಿಟ್ಟಿನಲ್ಲಿ ರೈತರು ಧರಣಿ ನಡೆಸಲಿದ್ದಾರೆ.
ತುಮಕೂರು, ಬೆಳಗಾವಿ, ಗದಗ, ಧಾರವಾಡ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬೆಳಗ್ಗೆ ರಾಜಭವನದ ಹೈಕೋರ್ಟ್ ನ್ಯಾಯಮೂರ್ತಿಗಳ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಅವರು ತುಮಕೂರಿಗೆ ತೆರಳಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಬಳಿಕ ಆರೋಗ್ಯ ಇಲಾಖೆಯ ನೂತನ ಆಸ್ಪತ್ರೆಗಳು, ಪ್ರವಾಸಿಮಂದಿರ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹಾಗೆ ಸಂಜೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ಸಿಎಂ ತೆರಳಿ ಪುರಸಭೆ ಆಡಳಿತ ಕಚೇರಿ ಉದ್ಘಾಟಿಸಲಿದ್ದಾರೆ. ಹಾಗೇ ನೂತನ ಬಸ್ ನಿಲ್ದಾಣದ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದಾರೆ.
ಇಂದು ರಾತ್ರಿ ಬೆಳಗಾವಿ ನಗರಕ್ಕೆ ತೆರಳಿ ಅಲ್ಲೆ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಅಭಯ್ ಪಾಟೀಲ್ ಅವರಿಗೆ ಭೇಟಿಯಾಗಿ ನಂತರ ಪಾಲಿಕೆ ಬಿಜೆಪಿ ಸದಸ್ಯರಿಗೆ ಸನ್ಯಾನ ಮಾಡಲಿದ್ದಾರೆ. ಗದಗದಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆಯಲ್ಲಿ ಸೇರಿದಂತೆ, ನಾಳೆ ರಾತ್ರಿಯವರೆಗೆ ಹಲವು ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದು, ನಂತರ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.
ಕರ್ನಾಟಕ ಟಿವಿ – ಬೆಂಗಳೂರು