- Advertisement -
ಕನ್ನಡದ ಹಿರಿಯ ಸಾಹಿತಿ ಚಂಪಾ ಎಂದೇ ಖ್ಯಾತಿಯಾಗಿದ್ದ ಚಂದ್ರಶೇಖರ್ ಪಾಟೀಲ್( 83) ವರ್ಷ ಇಂದು ವಿಧಿವಶರಾಗಿದ್ದಾರೆ. ಇಂದು ಮುಂಜಾನೆ ಸಿ ಎಂ. ಬಸವರಾಜ್ ಬೊಮ್ಮಾಯಿ ಮತ್ತು ಸುಧಾಕರ್ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದರು. ಚಂಪಾರವರು ಸಾಹಿತ್ಯದ ಜೊತೆ ಕನ್ನಡ ನಾಡು,ನುಡಿ,ಸಂಸ್ಕೃತಿ, ಹೋರಾಟವನ್ನು ಮಾಡಿಕೊಂಡು ಬಂದಿದ್ದರು. ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ವವ ಪ್ರಶಸ್ತಿ. ಕರುನಾಡ ಭೂಷಣ ಪ್ರಶಸ್ತಿ,2018 ನೇ ಸಾಲಿನಲ್ಲಿ ಬಸವ ಪ್ರಶಸ್ತಿ ಲಭಿಸಿದೆ. ಇವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ಮುಂಜಾನೆ 6.30 ರ ಸುಮಾರಿಗೆ ಬೆಂಗಳೂರಿನ ಕೋಣನಕುಂಟೆ ಬಳಿಯ ಖಾಸಗೀ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
- Advertisement -