Monday, October 2, 2023

Latest Posts

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಕುಮಾರಸ್ವಾಮಿ

- Advertisement -

ನವದೆಹಲಿ: ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ರು. ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿರೋ ಕುಮಾರಸ್ವಾಮಿ ಮೊದಲು ರಾಹುಲ್ ಗಾಂಧಿಯನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ರು.

ರಾಜ್ಯದ ಪ್ರಸಕ್ತ ರಾಜಕೀಯದ ಬಗ್ಗೆ ರಾಹುಲ್ ಜೊತೆ ಚರ್ಚಿಸಿದ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರು ಅತ್ಯುತ್ತಮ ಸಹಕಾರ ನೀಡುತ್ತಿದ್ದು ಎಲ್ಲವೂ ಸರಿಯಿದೆ ಅಂತ ರಾಹುಲ್ ಗಾಂಧಿಗೆ ಮಾಹಿತಿ ನೀಡಿದ್ದಾರೆ.

ಇನ್ನು ರಾಷ್ಟ್ರ ರಾಜಕಾರಣಕ್ಕೆ ನಿಮ್ಮ ಅಗತ್ಯವಿದೆ. ಆದ್ದರಿಂದ ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ತಾವೇ ಮುಂದುವರಿಯಬೇಕು ಅಂತ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ. ಸಚಿವರಾದ ಬಂಡೆಪ್ಪ ಕಾಶೆಂಪೂರ್, ಸಾರಾ‌ ಮಹೇಶ್ ಕೂಡ ಸಿಎಂಗೆ ಸಾಥ್ ನೀಡಿದ್ರು.

ತಮ್ಮ ಸೋಲಿಗೆ ಕಾರಣ ಬಿಚ್ಚಿಟ್ಟ ನಿಖಿಲ್. ತಪ್ಪದೇ ಈ ವಿಡಿಯೋ ನೋಡಿ

https://www.youtube.com/watch?v=L_DdcbxnBVY
- Advertisement -

Latest Posts

Don't Miss