ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ದೂರ ಉಳಿದು, ಜೆಡಿಎಸ್ ಸೇರುವ ಎಲ್ಲಾ ಪ್ರಯತ್ನದಲ್ಲಿ ಇರುವಂತ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಂಖಡ ಸಿಎಂ ಇಬ್ರಾಹಿಂ ಅವರು, ಇಂದು ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿರುವಂತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಕಚೇರಿಗೆ ತೆರಳಿ, ತಮ್ಮ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಅಂದಹಾಗೇ, ಕಾಂಗ್ರೆಸ್ ನಾಯಕೊಂದಿಗೆ ಮುನಿಸಿಕೊಂಡಿರುವಂತ ಅವರು, ಅಧಿವೇಶನ ಮುಗಿದ ಬೆನ್ನಲ್ಲೇ ಅಧಿಕೃತವಾಗಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡುವ ತೀರ್ಮಾನ ಮಾಡಿದ್ದಾರೆ.




