JDS ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಷದ ಧ್ವಜ ನೀಡುವ ಮೂಲಕ ಹೆಚ್.ಕೆ ಕುಮಾರಸ್ವಾಮಿಯಿಂದ ಸಿಎಂ ಇಬ್ರಾಹಿಂಗೆ ಅಧಿಕಾರ ಹಸ್ತಾಂತರ ಮಾಡಿದರು. ಇದೇ ವೇಳೆ ಜೆಡಿಎಸ್ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಹೆಚ್.ಕೆ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದರು.

ಈ ವೇಳೆ ಮಾತನಾಡಿದಂತ ಜೆಡಿಎಸ್ ವರಿಷ್ಠ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ,ಎರಡೂವರೆ ವರ್ಷಗಳ ಕಾಲ ಹೆಚ್.ಕೆ ಕುಮಾರಸ್ವಾಮಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಸಂಕಷ್ಟ ಕಾಲದಲ್ಲಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡು ಮುನ್ನಡೆಸಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತಿದ್ದರು. ನಮ್ಮ ಕುಟುಂಬದ ಸದಸ್ಯರಾಗಿದ್ದಾರೆ. ಇಬ್ರಾಹಿಂ ಮತ್ತೆ ತವರು ಪಕ್ಷಕ್ಕೆ ಮರಳಿದ್ದಾರೆ ಎಂದರು.

ಜನತಾ ಜಲಧಾರೆ ಹೆಸರಿನಲ್ಲಿ ಯಶಸ್ವಿಯಾಗಿ ಕಾರ್ಯಕ್ರಮಕ್ಕೆ ಚಲನೆ ಕೊಟ್ಟಿದ್ದೇವೆ. ಮೇ.೮ರವರೆಗೆ ಜನತಾ ಜಲಧಾರೆ ಯಾತ್ರೆ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಬಿಜೆಪಿ ಕಾರ್ಯಕಾರಿಣಿಯನ್ನ ಹಮ್ಮಿಕೊಂಡಿದೆ. ಕಾಂಗ್ರೆಸ್ ಪರ್ಸಂಟೇಜ್ ಪ್ರಕರಣದೊಂದಿಗೆ ಬೀದಿಗೆ ಇಳಿದಿದೆ. ಈಶ್ವರಪ್ಪರನ್ನ ಬಂಧಿಸಬೇಕೆಂದು ಒತ್ತಾಯಿಸುತ್ತಿದೆ. ಜೆಡಿಎಸ್ ರಾಜ್ಯದ ಶಾಂತಿಯ ತೋಟವನ್ನ ಬಯಸುತ್ತಿದೆ ಎಂದರು.

ಕಾಂಗ್ರೆಸ್, ಬಿಜೆಪಿ ಪಕ್ಷಗಳಿಗೆ ಜನರ ಕಷ್ಟ ಬಗೆಹರಿಸುವುದು ಬೇಕಿಲ್ಲ. ನೀರಾವರಿ, ನಿರುದ್ಯೋಗ ಸಮಸ್ಯ, ಶಾಂತಿ ಸೃಷ್ಟಿಸುವ ಯಾವುದೇ ನಿರ್ಣಯವನ್ನ ಬಿಜೆಪಿ ಕಾರ್ಯಕಾರಿಣಿಯಲ್ಲಿ ಚರ್ಚಿಸಿಲ್ಲ. ಕೇವಲ ಅಧಿಕಾರ ಹಿಡಿಯುವುದಷ್ಟೇ ಅಜೆಂಡಾವಾಗಿದೆ. ಕಾಂಗ್ರೆಸ್ ಗೆ ಹೋರಾಟ ಮಾಡಲು ಯಾವುದೇ ವಿಷಯಗಳಿಲ್ಲ. ನನ್ನ ಬಗ್ಗೆ ಯಾರಾದರೂ ಭ್ರಷ್ಟಾಚಾರದ ಸಾಕ್ಷ್ಯ ತೋರಿಸಿದರೆ ರಾಜಕೀಯ ನಿವೃತ್ತಿ ಅಂತಾ ಹೇಳಿದ್ದಾರೆ. ಇದು ಎಂಟನೇ ಅದ್ಭುತವೇ ಸರಿ ಎಂದರು.

ಭ್ರಷ್ಟಾಚಾರದ ವಿರುದ್ಧ ಹೋರಾಡಲು ಕಾಂಗ್ರೆಸ್ ಗೆ ಯಾವ ನೈತಿಕತೆ ಇದೆ. ನಮ್ಮ ನಿಲುವುಗಳ ಬಗ್ಗೆ ಕೆಲವರು ಅನಗತ್ಯ ಚರ್ಚೆ ಮಾಡುತ್ತಿದ್ದಾರೆ. ಇಬ್ರಾಹಿಂರನ್ನ ಪಕ್ಷಕ್ಕೆ ಕರೆ ತಂದಿರುವುದು ಒಂದು ವರ್ಗದ ಓಲೈಕೆಯ ಕಸರತ್ತು ಅಷ್ಟೇ ಅಂತಾ ಆರೋಪಿಸ್ತಾರೆ ಎಂದು ಹೇಳಿದರು.

About The Author