ಮೈಸೂರು: ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಲು ಮೈಸೂರಿನಲ್ಲಿ ವಾಸ್ತವ್ಯ ಹೂಡಿರೋ ಸಿಎಂ ಕುಮಾರಸ್ವಾಮಿ ಮೈತ್ರಿ ಕಾಪಾಡಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಮೈಸೂರಿನ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸುತ್ತಿರೋ ಸಿಎಂ, ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋತರೆ ಉಂಟಾಗುವ ಪರಿಣಾಮದ ಬಗ್ಗೆ ಲೆಕ್ಕಾಚಾರ ಹಾಕುತ್ತಿದ್ದಾರೆ.
ಖಾಸಗಿ ರೆಸಾರ್ಟ್ ನಲ್ಲಿ ತಂಗಿರೋ ಸಿಎಂ ಕುಮಾರಸ್ವಾಮಿ, ಇಂದು ಸಹ ಅಲ್ಲಿಯೇ ಇರಲಿದ್ದಾರೆ. ಕೇವಲ ಒಂದು ಕಾರ್ಯಕ್ರಮದಲ್ಲಿ ಮಾತ್ರ ಭಾಗಿಯಾಗಿ ಮತ್ತೆ ಚರ್ಚೆಗೆ ಹೆಚ್ಚು ಸಮಯ ಕೊಡುತ್ತಿದ್ದಾರೆ ಎನ್ನಲಾಗಿದೆ. ಹಾಗೆಯೇ ಮಂಡ್ಯ ರಾಜಕಾರಣದ ಕುರಿತಾಗಿಯೂ ಚರ್ಚೆ ನಡೆಸ್ತಿದ್ದಾರೆ. ಈ ಎಲ್ಲಾ ಅಂಶಗಳ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಿ ನಾಳೆ ಬೆಳಗ್ಗೆ ಬೆಂಗಳೂರಿನತ್ತ ಕುಮಾರಸ್ವಾಮಿ ಪ್ರಯಾಣ ಬೆಳೆಸಲಿದ್ದಾರೆ.
ಸಿಎಂ ಕುಮಾರಸ್ವಾಮಿ ಜೊತೆ ಚರ್ಚೆಯಲ್ಲಿ ಸಚಿವ ಸಾ.ರಾ.ಮಹೇಶ್, ಜಿ.ಟಿ ದೇವೇಗೌಡ ಭಾಗಿಯಾಗಿದ್ದಾರೆ.