ಬೆಂಗಳೂರು: ನಿನ್ನೆಯಷ್ಟೇ ಮಂಡ್ಯದಲ್ಲಿ ಜನರ ಮೇಲೆ ಎಗರಾಡಿದ್ದ ಸಚಿವ ಡಿ.ಸಿ ತಮ್ಮಣ್ಣಾಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡೋ ಮೂಲಕ ನೀತಿ ಪಾಠ ಹೇಳಿದ್ದಾರೆ.
ಮಂಡ್ಯದಲ್ಲಿ ನಿನ್ನೆ ರಸ್ತೆ ಹಾಗೂ ಚರಂಡಿ ಕಾಮಗಾರಿ ಕುರಿತಾಗಿ ಮನವಿ ಮಾಡಿಕೊಂಡಿದ್ದ ಜನರನ್ನೇ ತರಾಟೆಗೆ ತೆಗೆದುಕೊಂಡಿದ್ದ ಸಚಿವ ತಮ್ಮಣ್ಣಗೆ ಸಿಎಂ ಕುಮಾರಸ್ವಾಮಿ ಬುದ್ಧಿವಾದ ಹೇಳಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಿಎಂ-‘ ಚುನಾವಣೆ ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಬೆರೆಸುವುದು ಸೂಕ್ತವಲ್ಲ. ಜನಪ್ರತಿನಿಧಿಗಳಾದ ಹಾಗೂ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆದಿರುವ ನಾವೆಲ್ಲರೂ ಪಕ್ಷಾತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೆ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ. ಇದೇ ಪ್ರಜಾಪ್ರಭುತ್ವದ ಸತ್ವ – ಸಾರ!’ ಅಂತ ಬರೆದುಕೊಂಡಿದ್ದಾರೆ.
ನಿನ್ನೆ ಮಂಡ್ಯ ಜಿಲ್ಲೆಯ ಮದ್ದೂರಿನ ಮದ್ದೂರಮ್ಮ ಕೆರೆಗೆ ಸಚಿವ ತಮ್ಮಣ್ಣ ಭೇಟಿ ನೀಡಿದ್ದ ವೇಳೆ ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಮನವಿ ಮಾಡಿದ್ದ ಜನರಿಗೆ ನಿಮಗೆ ನಾಚಿಕೆಯಾಗಲ್ವಾ, ಮತ ಹಾಕದೆ ಅಭಿವೃದ್ಧಿ ಕೆಲಸ ಕೇಳುತ್ತಿದ್ದೀರಲ್ಲ ಅಂತ ತರಾಟೆಗೆ ತೆಗೆದುಕೊಂಡಿದ್ರು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿತ್ತು.
ಇದನ್ನು ಮಾಡಿಸದಿದ್ದರೆ ನಿಮಗೆ ರೇಷನ್ ಸಿಗೋದಿಲ್ಲ…!! ಮಿಸ್ ಮಾಡದೇ ಈ ವಿಡಿಯೋ ನೋಡಿ