Monday, September 25, 2023

Latest Posts

ಫಲಿತಾಂಶ ಅನಿರೀಕ್ಷಿತ- ಪಕ್ಷವನ್ನು ಬಲಪಡಿಸೋಣ- ಸಿಎಂ ಕುಮಾರಸ್ವಾಮಿ

- Advertisement -

ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರೋ ಮೈತ್ರಿ ಸರ್ಕಾರದ ಸಿಎಂ ಕುಮಾರಸ್ವಾಮಿ ಫಲಿತಾಂಶದ ಕುರಿತಾಗಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ. ಈ ಫಲಿತಾಂಶವನ್ನು ಗೌರವಿಸುತ್ತೇನೆ ಹಾಗೂ ಮತ್ತೊಮ್ಮೆ ಜನಾದೇಶ ಪಡೆದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೂ ನನ್ನ ಶುಭಾಶಯಗಳು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇನ್ನು ಸೋಲಿನ ಕುರಿತು ಹೇಳಿಕೊಂಡಿರೋ ಕುಮಾರಸ್ವಾಮಿ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ. ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ. ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ. ಅಂತ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಇನ್ನು ಚುನಾವಣೆಯ ಸಂದರ್ಭದಲ್ಲಿ ಸಹಕರಿಸಿದ ಮೈತ್ರಿ ಪಕ್ಷಗಳ ಎಲ್ಲ ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳು ಅಂತ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss