Thursday, December 19, 2024

Latest Posts

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಿಎಂ ಪ್ರತಿಕ್ರಿಯೆ

- Advertisement -

Political News: ಬೆಳಗಾವಿಯಲ್ಲಿ ಚಳಿಗಾಲದ ಅದಿವೇಶನ ನಡೆಯುತ್ತಿದ್ದು, ಈ ವೇಳೆ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರು ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜೊತೆ ಮಾತನಾಡಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿದೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿಗಳಿಗೆ ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ. ಕಾನೂನಾತ್ಮಕವಾಗಿ ಏನು ಕ್ರಮ ಕೈಗೊಳ್ಳುತ್ತಾರೆ ನೋಡೋಣ ಎಂದಿದ್ದಾರೆ.

ಸಿ.ಟಿ.‌ರವಿಯವರು ಹತ್ತಕ್ಕೂ ಹೆಚ್ಚು ಬಾರಿ ಅತ್ಯಂತ ಕೀಳು ಪದದಿಂದ ನಿಂದನೆ ಮಾಡಿದ್ದಾರೆ ಎಂದು ಅಲ್ಲಿ ಸುತ್ತಲೂ ಇದ್ದ ನಮ್ಮ ಪರಿಷತ್ ಸದಸ್ಯರು ಹೇಳುತ್ತಿದ್ದಾರೆ. ರವಿಯವರ ಮಾತಿನಿಂದ ನೊಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರು ದೂರು ದಾಖಲಿಸಿದ್ದಾರೆ. ಇದು ಲೈಂಗಿಕ ದೌರ್ಜನ್ಯದಂತಹ ಪ್ರಕರಣವಾಗಿರುವುದರಿಂದ ಪೊಲೀಸರು ಕ್ರಿಮಿನಲ್ ಪ್ರೊಸಿಜರ್ ರೀತ್ಯಾ ಕ್ರಮ ವಹಿಸುತ್ತಾರೆ ಎಂದು ಸಿಎಂ ಸಿದ್ದರಾಮ್ಯ ಹೇಳಿದ್ದಾರೆ.

- Advertisement -

Latest Posts

Don't Miss