Political News: ಇಂದು ಬೆಳಗಾವಿಯಲ್ಲಿ ನಡೆದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ, ಮೃಣಾಳ್ ಹೆಬ್ಬಾಳ್ಕರರ್ ಅವರನ್ನು ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು.
ಇದೇ ವೇಳೆ ಮಾತನಾಡಿದ ಸಿಎಂ, ಪ್ರಧಾನಿ ನರೇಂದ್ರಮೋದಿ ಅವರು ಬಿಜೆಪಿಯೇತರ ಪಕ್ಷಗಳು ದಲಿತರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದೆ ಎಂದು ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಎಂದಿಗೂ ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡದೇ, ಸಾಮಾಜಿಕ ನ್ಯಾಯದ ಪರವಾಗಿದೆ ಎನ್ನುವುದು ಇಡೀ ವಿಶ್ವಕ್ಕೆ ಗೊತ್ತಿದೆ. ಮೋದಿಯವರ ಮಾತು ನಂಬಲು ಜನ ಮೂರ್ಖರಲ್ಲ ಎಂದು ಸಿಎಂ ಆಕ್ರೋಶ ಹೊರಹಾಕಿದ್ದಾರೆ.
ನಾವು ಸರ್ಕಾರಿ ನೌಕರರ ಸಂಬಳವನ್ನು ಎಂದಿಗೂ ನಿಲ್ಲಿಸಿಲ್ಲ. ಅಭಿವೃದ್ಧಿ ಜೊತೆಗೆ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿಗಳಿಗೆ ₹52,009 ಕೋಟಿ, ₹1,20,000 ಕೋಟಿ ಅಭಿವೃದ್ಧಿಗೆ ನೀಡಲಾಗಿದೆ. ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಗ್ಯಾರಂಟಿಗಳನ್ನು ಜನರಿಗೆ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಸಂಬಳ ಕೊಡಲು ದುಡ್ಡಿಲ್ಲ. ಕರ್ನಾಟಕ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬುದು ಅಪ್ಪಟ ಸುಳ್ಳು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಗಳನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು. 25 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು. ಸಾಮಾಜಿಕ ನ್ಯಾಯ ತರಲು ದೇಶದಾದ್ಯಂತ ಜಾತಿ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು. ಆದ್ದರಿಂದ ಜನರಿಗೆ ಅನುಕೂಲ ಮಾಡಿಕೊಡುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೇ? ಅಥವಾ ಸುಳ್ಳು ಹೇಳುವ ನರೇಂದ್ರಮೋದಿ ಅವರು ಅಧಿಕಾರಕ್ಕೆ ಬರಬೇಕೇ? ಎಂಬುದನ್ನು ಯೋಚಿಸಿ ನಿರ್ಧರಿಸಿ ಎಂದು ಸಿಎಂ ಕರೆ ಕೊಟ್ಟಿದ್ದಾರೆ.
ಚುನಾವಣೆಯ ಮೂಲಕ ಜನತೆ ಕೊಡುವ ತೀರ್ಪು ದೇಶದ ಭವಿಷ್ಯವನ್ನು ರೂಪಿಸಲಿದೆ. ಯಾವ ಪಕ್ಷ ಅಧಿಕಾರದಲಿದ್ದರೆ ಈ ದೇಶದ ದಲಿತರ, ಹಿಂದುಳಿದವರು, ಅಲ್ಪಸಂಖ್ಯಾತರ ಅಭಿವೃದ್ಧಿಯಾಗುತ್ತದೆ? ದೇಶದ ಸರ್ವತೋಮುಖ ಅಭಿವೃದ್ಧಿಗೆ ಯಾರು ಅಧಿಕಾರದಲ್ಲಿರಬೇಕೆಂದು ಜನರು ತೀರ್ಮಾನ ಮಾಡಬೇಕಾಗುತ್ತದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡಿ ದೇಶದ ರೈತರ ಸಾಲ ಮನ್ನಾ ಮಾಡಿದ್ದರು. ಅವರು ಈ ದೇಶದ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆಯನ್ನು, ಉದ್ಯೋಗ ಖಾತ್ರಿ ಅಧಿನಿಯಮ, ಮಾಹಿತಿ ಹಕ್ಕು ಅಧಿನಿಯಮ, ಶಿಕ್ಷಣದ ಹಕ್ಕು ಇವುಗಳನ್ನು ಜಾರಿಗೆ ತಂದವರು ಮನಮೋಹನ್ ಸಿಂಗ್ ಅವರು. ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸುವ ಕಾನೂನುಗಳು ಇವು ಎಂದು ಅರ್ಥ ಮಡಿಕೊಳ್ಳಬೇಕು. ಆಹಾರ ಭದ್ರತಾ ಕಾಯ್ದೆ ಇಲ್ಲದೇ ಹೋಗಿದ್ದರೆ ಬಡವರಿಗೆ ಉಚಿತ ಅಕ್ಕಿ ಕೊಡಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಜಾರಿ ಮಾಡಿದ್ದು ನರೇಂದ್ರ ಮೋದಿ ಅಲ್ಲ. ಅದರ ಶ್ರೇಯಸನ್ನು ಪಡೆಯಲು ಮೋದಿ ಅವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾದಾನ ಹೊರಹಾಕಿದ್ದಾರೆ.
ಚುನಾವಣೆಯ ಮೂಲಕ ಜನತೆ ಕೊಡುವ ತೀರ್ಪು ದೇಶದ ಭವಿಷ್ಯವನ್ನು ರೂಪಿಸಲಿದೆ. ಯಾವ ಪಕ್ಷ ಅಧಿಕಾರದಲಿದ್ದರೆ ಈ ದೇಶದ ದಲಿತರ, ಹಿಂದುಳಿದವರು, ಅಲ್ಪಸಂಖ್ಯಾತರ ಅಭಿವೃದ್ಧಿಯಾಗುತ್ತದೆ? ದೇಶದ ಸರ್ವತೋಮುಖ ಅಭಿವೃದ್ಧಿಗೆ ಯಾರು ಅಧಿಕಾರದಲ್ಲಿರಬೇಕೆಂದು ಜನರು ತೀರ್ಮಾನ ಮಾಡಬೇಕಾಗುತ್ತದೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡಿ ದೇಶದ ರೈತರ ಸಾಲ… pic.twitter.com/PY5GNmIANl
— Siddaramaiah (@siddaramaiah) April 30, 2024
ನಾವು ಸರ್ಕಾರಿ ನೌಕರರ ಸಂಬಳವನ್ನು ಎಂದಿಗೂ ನಿಲ್ಲಿಸಿಲ್ಲ. ಅಭಿವೃದ್ಧಿ ಜೊತೆಗೆ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿಗಳಿಗೆ ₹52,009 ಕೋಟಿ, ₹1,20,000 ಕೋಟಿ ಅಭಿವೃದ್ಧಿಗೆ ನೀಡಲಾಗಿದೆ. ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಗ್ಯಾರಂಟಿಗಳನ್ನು ಜನರಿಗೆ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ… pic.twitter.com/3wArMd89Fp
— Siddaramaiah (@siddaramaiah) April 30, 2024
ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದೆ.
ಪ್ರಧಾನಿ @narendramodi ಅವರು ಬಿಜೆಪಿಯೇತರ ಪಕ್ಷಗಳು ದಲಿತರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದೆ ಎಂದು ಹಸಿ ಹಸಿ ಸುಳ್ಳು… pic.twitter.com/PuX6brBu0X
— Siddaramaiah (@siddaramaiah) April 30, 2024
ಪ್ರಜ್ವಲ್ ಪೆನ್‌ಡ್ರೈವ್ ಕೇಸ್‌ನ ಹೊಣೆಯನ್ನು ಬಿಜೆಪಿ ಮೇಲೆ ಹೊರಿಸುತ್ತಿರುವುದು ಹಾಸ್ಯಾಸ್ಪದ: ಚೇತನ್ ಅಹಿಂಸಾ
ನಿಮ್ಮ ಮಕ್ಕಳು ಹೆಚ್ಚು ಮೊಬೈಲ್ ಅಡಿಕ್ಟ್ ಆಗಿದ್ದರೆ ಗಮನಹರಿಸಿ: ಪೋಷಕರಿಗೆ ಪೊಲೀಸ್ ಅಧಿಕಾರಿಗಳ ಎಚ್ಚರಿಕೆ




