ಕಳೆದ ಒಂದು ತಿಂಗಳಿನಿಂದ ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಮತ್ತು ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್ ನಾಯಕರೊಳಗೇ ಬಣ ರಾಜಕೀಯ ನಡೆಯುತ್ತಿದೆ. ಆದ್ರಿಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸ್ವಾಮೀಜಿಯೊಬ್ಬರು ಸಿದ್ದರಾಮಯ್ಯ ಮುಂದೆಯೇ, ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಹೇಳಿರೋದು ಭಾರೀ ಚರ್ಚೆಗೆ ಕಾರಣವಾಗಿದೆ..
ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಸಿಎಂ ಸಿದ್ದರಾಮಯ್ಯ ಮುಂದೆ ವೇದಿಕೆಯ ಮೇಲೆಯೇ ಬೇಡಿಕೆ ಇಟ್ಟ ಪ್ರಸಂಗ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ನಡೆದಿದೆ.
ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.
ಇದು ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿದರೆ ಇದು ಆಗಲಿದೆ, ಇಲ್ಲಾಂದ್ರೆ ಆಗಲ್ಲ. ಹಾಗಾಗಿ ದಯವಿಟ್ಟು ಡಿಕೆ ಶಿವಕುಮಾರ್ ಅವರನ್ನು ಸಿಎಂ ಆಗಿ ಮಾಡಿ ಎಂದು ಮನವಿ ಮಾಡುತ್ತೇನೆ ಎಂದು ಸ್ವಾಮೀಜಿ ವೇದಿಕೆಯಲ್ಲಿ ಕೇಳಿಕೊಂಡರು. ಸ್ವಾಮೀಜಿ ನೀಡಿದ ಈ ಹೇಳಿಕೆಯನ್ನು ಸಭಿಕರಲ್ಲಿದ್ದ ಡಿಕೆ ಶಿವಕುಮಾರ್ ಬೆಂಬಲಿಗರು ಚಪ್ಪಾಳೆ ಶಿಳ್ಳೆಗಳ ಮೂಲಕ ಸ್ವಾಗತಿಸಿದರು.
ಡಿಕೆಶಿ CM ಮಾಡಿ ಎಂದು ಸಿಎಂಗೆ ವೇದಿಕೆಯಲ್ಲೇ ಒತ್ತಾಯಿಸಿದ ಸ್ವಾಮೀಜಿ!
- Advertisement -
- Advertisement -