Bollywood: ಖ್ಯಾತ ಗಾಯಕಿ ಆಶಾ ಬೋಸ್ಲೆ ಅವರು ಇಂದು ನಿಧನರಾಗಿದ್ದಾರೆ. 92 ವಯಸ್ಸಿನ ಆಶಾ ಅವರು ಹೃದಯದ ಸೋಂಕಿನ ಖಾಯಿಲೆಯಿಂದ ಬಳಲುತ್ತಿದ್ದರು. ನಿನ್ನೆ ಉಸಿರಾಡಲು ಸಮಸ್ಯೆ ಆಗುತ್ತಿದ್ದ ಕಾರಣಕ್ಕೆ ಅವರು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ, ಆಶಾ ಭೋಸ್ಲೆ ನಿಧನರಾಗಿದ್ದಾರೆ.
ಆಶಾ ಭೋಸ್ಲೆ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ರಾಜಕೀಯ ಗಣ್ಯರು, ಸಿನಿಮಾ ರಂಗದವರು ಎಲ್ಲರೂ ಸಂತಾಪ ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಕೂಡ ಆಶಾ ಭೋಸ್ಲೆ ನಿಧನಕ್ಕೆ ಸಂತಾಪ ಸೂಚಿಸಿದ್ದು, ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಹಲವು ದಶಕಗಳಿಂದ ಸುಮಾರು 12,000ಕ್ಕೂ ಅಧಿಕ ಹಾಡುಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ ಸ್ವರ ಸಾಮ್ರಾಜ್ಞಿಯನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ. ತಮ್ಮ ಸುಮಧುರ ಧ್ವನಿ, ಸರಳ ನಡೆ ನುಡಿ, ವಾತ್ಸಲ್ಯ ತುಂಬಿದ ಮಾತುಗಳಿಂದ ಅವರು ಜನಮಾನಸದಲ್ಲಿ ಶಾಶ್ವತ. ಆಶಾ ಭೋಸ್ಲೆಯವರ ನಿಧನದಿಂದ ಹಳೆಯ ಮತ್ತು ಹೊಸ ತಲೆಮಾರಿನ ಸಂಗೀತದ ಬಹುದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಬಂಧು ಮಿತ್ರರು ಹಾಗೂ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಹಲವು ದಶಕಗಳಿಂದ ಸುಮಾರು 12,000ಕ್ಕೂ ಅಧಿಕ ಹಾಡುಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ ಸ್ವರ ಸಾಮ್ರಾಜ್ಞಿಯನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ.
ತಮ್ಮ ಸುಮಧುರ ಧ್ವನಿ, ಸರಳ ನಡೆ ನುಡಿ, ವಾತ್ಸಲ್ಯ ತುಂಬಿದ ಮಾತುಗಳಿಂದ ಅವರು… pic.twitter.com/jZjPyLCJlz
— Siddaramaiah (@siddaramaiah) April 12, 2026
Deeply saddened by the passing of legendary singer Asha Bhosle. She redefined versatility in Indian music, lending her voice to countless unforgettable songs across generations, and leaves behind a legacy that will never fade.
My heartfelt condolences to her family. Om Shanti. pic.twitter.com/JSPbBvdynZ
— DK Shivakumar (@DKShivakumar) April 12, 2026




