ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಸ್‌ಟಿ ಪಡೆದು ನೋಟಿಸ್ ಪಡೆದು ಸಣ್ಣಪುಟ್ಟ ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದರು. ಅಲ್ಲದೆ ಇಂದೂ ಸಹ ಜಿಎಸ್‌ಟಿ ನೋಟಿಸ್ ಪಡೆದ ವ್ಯಾಪಾರಿಗಳು ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಗುರುವಾರ ಮತ್ತೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆಗೂ ಮುಂದಾಗಿದ್ದರು. ಆದರೆ ಇದೀಗ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಖಾಡಕ್ಕೆ ಇಳಿದಿದ್ದು, ವ್ಯಾಪಾರಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಜಿಎಸ್‌ಟಿ ನೊಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಬಂಪರ್ ಘೋಷಿಸಿದ್ದಾರೆ.
ಇದನ್ನೂ ಓದಿ : ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕನ ಮನೆ ಮೇಲೆ ಲೋಕಾ ದಾಳಿ
ಯುಪಿಐ ವಹಿವಾಟು ಕೈಬಿಟ್ಟರೆ ವ್ಯಾಪಾರದ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9ಸಾವಿರ ವ್ಯಾಪಾರಿಗಳಿಗೆ ಕಳೆದ 2 ರಿಂದ 3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ. ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ನಡೆಸಲು ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನೂ ನಮ್ಮ ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ. ಜಿಎಎಸ್‌ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇಕಾಡ 50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್‌ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು ಎಂದು ಅಭಯ ನೀಡಿದ್ದಾರೆ.