Sunday, April 13, 2025

Latest Posts

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

- Advertisement -

Bengaluru News: ಸಿಎಂ ಸಿದ್ದರಾಮಯ್ಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಿತ್ತು. ಇಲ್ಲಿಗೆ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಇಂದು ಒಂದು ಕ್ಯಾಂಟೀನನ್ನು ಉದ್ಘಾಟಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಒಟ್ಟು 2 ಇಂದಿರಾ ಕ್ಯಾಂಟೀನ್ ಸ್ಥಾಪನೆಯಾಗಲಿದೆ. ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ ಎಂದು ಸಿಎಂ ಹೇಳಿದ್ದಾರೆ.

ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10. ರೂ.ಗಳಿಗೆ ದೊರಕಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್‍ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನ: ಪ್ರಾರಂಭಿಸಿದ್ದೇವೆ ಎಂದು ಸಿಎಂ ಹೇಳಿದರು.

ಮುಸ್ಲಿಮರ ಬಗ್ಗೆ ಆ ಪೊಲೀಸರಿಗೆ ಎಷ್ಟು ದ್ವೇಷವಿದೆ ಅನ್ನೋದು ಇದರಲ್ಲೇ ಗೊತ್ತಾಗುತ್ತದೆ: ಓವೈಸಿ

ಮಂಡ್ಯದಲ್ಲಿ ಮುಂದಿನ ವರ್ಷದ ಬಜೆಟ್ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ

ತೃಣಮೂಲ ಕಾಂಗ್ರೆಸ್‌ನಿಂದ ಕ್ರಿಕೇಟಿಗ ಯುಸೂಫ್ ಪಠಾಣ್‌ಗೆ ಟಿಕೇಟ್

- Advertisement -

Latest Posts

Don't Miss