Saturday, July 27, 2024

Latest Posts

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

- Advertisement -

Political News: ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ. ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ ಎಂದಿದ್ದಾರೆ.

ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ. ಸಿನಿಮಾಗಳ ಮೂಲಕ ದೇಶದ ಒಳಗಿನ, ಇತರೆ ದೇಶಗಳ ಜನ ಸಂಸ್ಕೃತಿಯನ್ನು ಅರಿಯುವ ಮತ್ತು ಆ ಮೂಲಕ ನಮ್ಮ ಮಾನವೀಯ ಸಂಸ್ಕೃತಿಯನ್ನು ವಿಸ್ತರಿಸಿಕೊಳ್ಳಲು ನೆರವಾಗುತ್ತದೆ. ಇದಕ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ವೇಗವರ್ದಕವಾಗಿ ಕೆಲಸ ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಂಬೇಡ್ಕರ್ ಅವರು ರೂಪಿಸಿದ ಭಾರತೀಯ ಸಂವಿಧಾನದಲ್ಲಿ ಇತರೆ ದೇಶಗಳ ಸಂವಿಧಾನದಲ್ಲಿ ಇಲ್ಲದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ. ಅಂಬೇಡ್ಕರ್ ಮತ್ತು ಅವರ ಮೌಲ್ಯಗಳ ಕುರಿತಾದ ಸಿನಿಮಾಗಳಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು. ಕುವೆಂಪು ಅವರ ವಿಶ್ವ ಮಾನವ ಸಂಸ್ಕೃತಿಯನ್ನು ವಿಶ್ವದಲ್ಲಿ ಹೆಚ್ಚೆಚ್ಚು ಪಾಲಿಸುವಂಥ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ವಿಶ್ವ ಸಿನಿಮಾಗಳು ನೆರವಾಗುತ್ತವೆ ಎಂದು ಸಿಎಂ ಹೇಳಿದರು.

2019 ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ನಾವು ಬಾಕಿ ಉಳಿದಿರುವ ಎಲ್ಲಾ ವರ್ಷಗಳ ಉತ್ತಮ ಸಿನಿಮಾಗಳ ಆಯ್ಕೆಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿ ವರದಿ ಕೊಟ್ಟ ತಕ್ಷಣ ಪ್ರಶಸ್ತಿಗಳನ್ನು ಘೋಷಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶ್ರೇಷ್ಠ ನಟ ಶಿವರಾಜ್ ಕುಮಾರ್, ಅಂತಾರಾಷ್ಟ್ರೀಯ ಚಿತ್ರೋತ್ಸವದ ರಾಯಭಾರಿಯಾದ ನಟ ಡಾಲಿ ಧನಂಜಯ್, ಖ್ಯಾತ ನಿರ್ದೇಶಕ ಜಬ್ಬಾರ್ ಪಟೇಲ್, ಚೆಕ್ ರಿಪಬ್ಲಿಕ್ ದೇಶದ ಚಿತ್ರ ವಿಮರ್ಷಕರಾದ ಮೆಯೆರಾ ಲಾಂಗೆರೊವಾ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕರಾದ ವಿದ್ಯಾಶಂಕರ್, ನಟಿ ಆರಾಧನಾ, ಚಲನಚಿತ್ರ ಅಕಾಡೆಮಿಯ ನಿಯೋಜಿತ ಅಧ್ಯಕ್ಷರಾದ ಸಾಧು ಕೋಕಿಲಾ, ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ.ಸುರೇಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ದೇಶದ ಜನ ಬಿಜೆಪಿಗೆ ಯಾಕೆ ಓಟ್ ಹಾಕಬೇಕು..? ಸಿ.ಟಿ.ರವಿ ಹೇಳಿದ್ದೇನು..?

ಅನ್ನದಾನ ಸೇವೆಯೊಂದಿಗೆ ಅನಂತ್ ಅಂಬಾನಿ- ರಾಧಿಕಾ ಮದುವೆ ಕಾರ್ಯಕ್ರಮ ಶುರು

ಇಂಥ ಆದೇಶ ನೀಡಿರುವ ಕಾಂಗ್ರೆಸ್ ವಿಕೃತ ಮನಸ್ಥಿತಿಯ ಪ್ರತೀಕ: ಸಂಸದ ತೇಜಸ್ವಿ ಸೂರ್ಯ

- Advertisement -

Latest Posts

Don't Miss