Thursday, December 19, 2024

Latest Posts

ಸುವರ್ಣಸೌಧದಲ್ಲಿ ‘ಗೃಹಲಕ್ಷ್ಮೀ’ಯರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

- Advertisement -

Political News: ಬೆಳಗಾವಿಯ ಸುವರ್ಣಸೌಧಕ್ಕೆ ಆಗಮಿಸಿದ್ದ ಮಹಿಳಾ ಮಣಿಗಳನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ಇವರೆಲ್ಲ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಿದ್ದರು. ಗೃಹಲಕ್ಷ್ಮೀ ಹಣದಿಂದ ಅವರಿಗೆ ಯಾವ ರೀತಿ ಸಹಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಜೊತೆ ಇದೇ ವೇಳೆ ಮತನಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ. ಗೃಹಲಕ್ಷ್ಮಿ ಯೋಜನೆಯ ಹಣದಿಂದ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳ ಜೀವನದಲ್ಲಿ ಆಗಿರುವ ಲಾಭಗಳ ಬಗ್ಗೆ ವಿವರಿಸಿದ್ದಾರೆ. ಬದುಕಿಗೆ ಹೊಸ ಚೈತನ್ಯ ನೀಡಿದ ಗೃಹಲಕ್ಷ್ಮಿ ಯೋಜನೆಯನ್ನು ಸಾಕಾರಗೊಳಿಸಿದ ನನಗೆ, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಗೃಹಲಕ್ಷ್ಮಿಯರು ತಿಳಿಸಿದ್ದಾರೆ. ಈ ಎಲ್ಲರ ಮಾತುಗಳು ಕೇಳಿ ಸಂತೃಪ್ತ ಭಾವ ನನ್ನಲ್ಲಿ ಮೂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಿಂದ ಒಂದೇ ಮನೆಯ ಅತ್ತೆ ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆಸೊಸೆಯರೇ ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ. ಈ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆಯನ್ನು ಮುಂದುವರಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

Latest Posts

Don't Miss