ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಅಂತಾ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.
ಇನ್ನೂ ಜೈಲಿನಲ್ಲಿ ದರ್ಶನ್ಗೆ ರಾಜಾತಿಥ್ಯ ನೀಡಿದ ಸಂಬಂಧ 7 ಜೈಲಾಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ದರ್ಶನ್ ಸೇರಿದಂತೆ ಇತರ ಆರೋಪಿಗಳಿಗೆ ಕುಳಿತುಕೊಳ್ಳಲು ಕುರ್ಚಿ, ಟೇಬಲ್, ಕಾಫಿ-ಟೀ ಜೊತೆಗೆ ಸಿಗರೇಟ್ ಸೇರಿದಂತೆ ಎಲ್ಲ ಐಷಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ.