Friday, November 14, 2025

Latest Posts

ಡಿಕೆಶಿ ಬರಹ ‘ನೀರಿನ ಹೆಜ್ಜೆ’ ಕೃತಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ!

- Advertisement -

ರಾಜ್ಯದ ಜಲಸಂಪನ್ಮೂಲ, ಅದರ ಇತಿಹಾಸ, ಸವಾಲುಗಳು ಹಾಗೂ ಭವಿಷ್ಯದ ನೀರಿನ ನಿರ್ವಹಣಾ ಯೋಜನೆಗಳ ಬಗ್ಗೆ ಬೆಳಕು ಚೆಲ್ಲುವ ಉದ್ದೇಶದಿಂದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ರಚಿಸಿರುವ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬಿಡುಗಡೆ ಮಾಡಿದರು.

ಈ ವೇಳೆ ಕಾರ್ಯಕ್ರಮದಲ್ಲಿ ಸಚಿವರಾದ H.K. ಪಾಟೀಲ್, N.S. ಬೋಸರಾಜು, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಸುಧಾಕರ್ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ, ಆರ್.ವಿ. ದೇಶಪಾಂಡೆ, ತುಷಾರ್ ಗಿರಿನಾಥ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಹಾಗೂ ಕೃತಿ ನಿರೂಪಕ, ಹಿರಿಯ ಪತ್ರಕರ್ತ ಹಮೀದ್ ಪಾಳ್ಯ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ನೀರಿನ ಹೆಜ್ಜೆ ಕೃತಿಯು ರಾಜ್ಯದ ಜಲಸಂಪನ್ಮೂಲಗಳ ಬಳಕೆ, ಸಂರಕ್ಷಣಾ ಪ್ರಯತ್ನಗಳು ಮತ್ತು ಮುಂದಿನ ನೀತಿಗಳ ಕುರಿತು ಸಮಗ್ರ ಮಾಹಿತಿಯನ್ನು ಒಳಗೊಂಡಿದ್ದು, ನೀರು ನಿರ್ವಹಣೆಯ ಭವಿಷ್ಯ ದಿಕ್ಕಿನತ್ತ ಮಾರ್ಗದರ್ಶನ ನೀಡುತ್ತದೆ ಎಂದು ಈ ವೇಳೆ ತಿಳಿಸಲಾಯಿತು.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss