Tuesday, November 18, 2025

Latest Posts

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

- Advertisement -

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗಳು ಸೇರಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ.

ಎರಡುವರೆ ವರ್ಷ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಗರಿಗೆದರಿವೆ. ಈ ಹಿನ್ನೆಲೆ­ಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ರಾಜಕೀಯ ಮಹತ್ವ ಪಡೆದುಕೊಂಡಿದೆ.

ನವೆಂಬರ್ ಕ್ರಾಂತಿಯೇ ಅಥವಾ ಸರ್ಕಾರದ ಒಳಗಿನ ಅಸಮಾಧಾನವೇ? ಎಂಬ ಪ್ರಶ್ನೆಗಳು ಕೇಳಿಬರುತ್ತಿರುವಾಗ, ಮೋದಿಯವರ ಭೇಟಿ ಕುರಿತು ಸ್ವತಃ ಸಿದ್ದರಾಮಯ್ಯ ಅವರೇ ಕಾರಣ ಸ್ಪಷ್ಟಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹೇಳುವಂತೆ, ರಾಜ್ಯದ ಪ್ರಮುಖ ಅಭಿವೃದ್ಧಿ ಯೋಜನೆಗಳು, ಕೇಂದ್ರದ ಸಹಕಾರ ಅಗತ್ಯವಿರುವ ಯೋಜನೆಗಳಿಗೆ ಅನುದಾನ ಹಾಗೂ ಮಂಜೂರಾತಿ ಕುರಿತ ಚರ್ಚೆಯೇ ಭೇಟಿ ಮಾಡುವ ಉದ್ದೇಶದ ಬಗ್ಗೆ ಹೇಳಿಕೊಂಡಿದ್ದಾರೆ.

ಈ ಭೇಟಿ ಯಾವುದೇ ರಾಜಕೀಯ ಅರ್ಥೈಸಿಕೆಗೆ ಕಾರಣವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಅಂಗಳದಲ್ಲಿ ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳು ಜೋರಾಗಿರುವ ವೇಳೆಯಲ್ಲಿ ನಡೆದಿರುವ ಈ ಭೇಟಿ ರಾಜ್ಯ ರಾಜಕೀಯದಲ್ಲಿ ಹೊಸ ವ್ಯಾಖ್ಯಾನಗಳಿಗೆ ಕಾರಣವಾಗುತ್ತಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss