Wednesday, July 9, 2025

Latest Posts

ಈ ಸಲ ಕಪ್ ನಮ್ದೇ ಎಂದ ಸಿಎಂ ಸಿದ್ದರಾಮಯ್ಯ, ಆರ್‌ಸಿಬಿ ಆಟಗಾರರಿಗೆ ಅಭಿನಂದನೆಗಳ ಮಹಾಪೂರ

- Advertisement -

Sports News: 18 ವರ್ಷಗಳ ಬಳಿಕ ಮೊಟ್ಟ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆದ್ದಿದ್ದು, ಇತಿಹಾಸ ನಿರ್ಮಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಮ್ಯಾಚ್ ಇದ್ದು, ಪಂಜಾಬ್ ಸೂಪರ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ಗೆಲುವು ಸಾಧಿಸಿ, ತನ್ನ ಚೊಚ್ಚಲ ಕಪ್‌ಗೆ ಮುತ್ತಿಕ್ಕಿದೆ.

ಇನ್ನು ರಾಯಲ್ಸ್ ಚಾಸೆಂಜರ್ಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ವಿಶ್ ಮಾಡಿದ್ದಾರೆ.    @IPL2025 ಟೂರ್ನಿಯಲ್ಲಿ ಐತಿಹಾಸಿಕ ದ್ವಿಗಿಜಯ ಸಾಧಿಸಿದ @RCBTweets ಬೆಂಗಳೂರು ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಆರೂವರೆ ಕೋಟಿ ಕನ್ನಡಿಗರ ಕನಸನ್ನು ನನಸು ಮಾಡಿದ ಪಟಿದಾರ್ ಪಡೆಯ ಶ್ರೇಷ್ಠ ಕ್ರಿಕೆಟ್ ಕನ್ನಡಿಗರು ಮಾತ್ರವಲ್ಲದೆ ಇಡೀ ಜಗತ್ತಿನ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡಿದೆ. ಕರ್ನಾಟಕದ ಕ್ರಿಕೆಟ್ ಇತಿಹಾಸದಲ್ಲಿಯೇ ಈ ಗೆಲುವು ಮಹೋನ್ನತ ಮೈಲುಗಲ್ಲು ಎಂಬುದು ನನ್ನ ಅಭಿಪ್ರಾಯ. ಮುಖ್ಯವಾಗಿ 18 ವರ್ಷಗಳಷ್ಟು ಸುದೀರ್ಘ ಕಾಲ ತಂಡ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡ ಹಿರಿಯ ಆಟಗಾರ ಶ್ರೀ @imVkohli ಅವರನ್ನು ಅಭಿನಂದಿಸುತ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅಭಿನಂದಿಸಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. Rrrrrrrrr…. Cccccccc…. Bbbbbbbbb…. ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ. ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ ಎಂದು ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

 

- Advertisement -

Latest Posts

Don't Miss