‘ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ’

Political News: ವಾಸ್ತುದೋಷದ ಕಾರಣಕ್ಕಾಗಿ ಕಳೆದ 5 ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು, ತೆರೆಸಿ ಸಿಎಂ ಸಿದ್ದರಾಮಯ್ಯ ಅದೇ ಬಾಗಿಲಿನಿಂದ ಇಂದು ಕಚೇರಿಯ ಪ್ರವೇಶ ಮಾಡಿದ್ದಾರೆ. ಈ ಮೂಲಕ, ಕೆಲಸದಲ್ಲಿ ನಿಯತ್ತಿದ್ದರೆ, ಪ್ರಾಮಣಿಕತೆ ಇದ್ದರೆ, ಅದಕ್ಕೆ ಮುಹೂರ್ತ ದಿಕ್ಕುಗಳೆಲ್ಲ ಅಡ್ಡ ಬರಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಜನರ ಬಗ್ಗೆ ಕಾಳಜಿ, ನಡತೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ. ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ, ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ. ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ. ನಡೆ – ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ. ಜನತೆಯ ಆಶೀರ್ವಾದ ಇರಲಿ ಎಂದು ಟ್ವೀಟ್ ಮಾಡಿದ್ದಾರೆ.

ಪರೋಕ್ಷವಾಗಿ ಸಭಾಪತಿ ಸ್ಥಾನಕ್ಕೆ ಒಮ್ಮತ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್

ಬಿಜೆಪಿಯ ಅಡಿಪಾಯವೇ ಡಿಸ್ಟರ್ಬ್ ಆಗಿ ಕುಸಿದು ಹೋಗುತ್ತಿದೆ: ಜಗದೀಶ್ ಶೆಟ್ಟರ್

‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ, ರಾಹುಲ್ ಗಾಂಧಿ ಪ್ರಧಾನಿಯಾಗೇ ಆಗ್ತಾರೆ’

About The Author