Wednesday, October 29, 2025

Latest Posts

ಮುಂದಿನ ಚುನಾವಣೆಯಲ್ಲಿ ಸಿದ್ದು ಸ್ಪರ್ಧಿಸುತ್ತಾರಾ?

- Advertisement -

ಸಿಎಂ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಸ್ಪರ್ಧಿಸುವುದು ಖಚಿತ. ಹೀಗಂತ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟನೆ ಕೊಟ್ಟಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಬಹಳಷ್ಟು ರಾಜಕೀಯ ನಡೆಯುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನಾವೆಲ್ಲಾ ಕಾಂಗ್ರೆಸ್ ಪಕ್ಷದ ಕಟ್ಟಾಳುಗಳು. ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದು ಸುಳ್ಳು. 2028ರ ಚುನಾವಣೆಯಲ್ಲಿಯೂ ಅವರು ಸ್ಪರ್ಧೆ ಮಾಡಬೇಕೆಂಬುದು ನಮ್ಮೆಲ್ಲರ ಹಕ್ಕೊತ್ತಾಯವಾಗಿದೆ.

ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯದಾಗಬೇಕಾದ್ರೆ ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧೆ ಮಾಡಲೇಬೇಕು. ಸಚಿವ ಸಂಪುಟ ಪುನಾರಚನೆ, ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ನೇಮಕಾತಿ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ, ನಿರ್ಧಾರ ಕೈಗೊಳ್ಳಲು ಹೈಕಮಾಂಡ್ ಸಮರ್ಥವಾಗಿದೆ.

ಪ್ರಸ್ತುತ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅವರಿದ್ದಾರೆ. ಮುಂದೆ ಏನಾಗಬೇಕು? ಏನು ನಿರ್ಧಾರ ತೆಗೆದುಕೊಳ್ಳಬೇಕೆಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಹೀಗಂತ ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ಜಿಬಿಎ ಪೂರ್ವಭಾವಿ ಸಭೆಯಲ್ಲಿ ಬೈರತಿ ಸುರೇಶ್‌ ಹೇಳಿದ್ದಾರೆ.

- Advertisement -

Latest Posts

Don't Miss