ಹುಬ್ಬಳ್ಳಿ ನೇಹಾ ಹ* ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ರಿಯಾಕ್ಷನ್

Hubli Crime news: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ. ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು. ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ‌ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಕಾನೂನು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ಈ ಮಾತಂಧರ ಕೈಗಿಟ್ಟು ನಿದ್ದೆ ಹೋಗಿದೆ: ಪ್ರೀತಂಗೌಡ

ಯಾವುದೇ ಸಮಯದಲ್ಲೂ ಕರ್ನಾಟಕ ಸದಾ ಕೇರಳದ ಜೊತೆ ಇರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಸರ್ಕಾರದ ಕುಮ್ಮಕ್ಕು ಇಂಥ ದುಷ್ಟಶಕ್ತಿಗಳಿಗೆ ಇರುವುದು ಸ್ಪಷ್ಟವಾಗಿದೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

About The Author