Saturday, November 15, 2025

Latest Posts

ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಮಾತು..

- Advertisement -

Haveri Political News: ಹಾವೇರಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮೊದಲ ಬಾರಿ ಹೇಳಿಕೆ ಕೊಟ್ಟಿದ್ದಾರೆ.

ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.

ಎಸ್.ಐ.ಟಿ ನಲ್ಲಿರುವವವರೂ ಪೊಲೀಸರೇ. ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನಿಸಲಾಗುವುದು. ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆ ಮೇಲೆ ದೌರ್ಜನ್ಯ ನಡೆದಾಗ ಗೃಹ ಸಚಿವರು ಭೇಟಿ ನೀಡಿದ್ದರು. ಭೇಟಿ ನೀಡುವಂತೆ ನಾನೇ ಸೂಚನೆ ನೀಡಿದ್ದೆ. ಇಲ್ಲಿ ಗೃಹ ಸಚಿವರು ಇರಲಿಲ್ಲ. ಕೇಂದ್ರದ ಮಾಜಿ ಸಚಿವ ಶಿವಣ್ಣ ಭೇಟಿ ನೀಡಿದ್ದಾರೆ. ಸಂತ್ರಸ್ತೆಯನ್ನು ಭೇಟಿ ಮಾಡಿ ಸಾಂತ್ವನ ಹೇಳುವುದು ಒಂದು ಭಾಗವಾದರೆ, ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವುದು ಮತ್ತೊಂದು ಭಾಗ. ಎರಡನ್ನೂ ಮಾಡಿದ್ದೇವೆ. ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು. ರೈತರರಿಗೆ ಪರಿಹಾರ ನೀಡಿಲ್ಲವೆಂದು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ರೈತರಿಗೆ 2,000 ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಎನ್.ಡಿ.ಆರ್.ಎಫ್ ನಡಿ ಬರ ಪರಿಹಾರ ಬಂದ ನಂತರ ಪುನಃ ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅನಂತಕುಮಾರ್ ಹೆಗಡೆಯವರು ಮುಖ್ಯಮಂತ್ರಿ ಹುದ್ದೆಯಲ್ಲಿರುವ ವ್ಯಕ್ತಿಗೆ ಏಕವಚನದಲ್ಲಿ ಮಾತನಾಡುವುದನ್ನು ಸಮರ್ಥಿಸಿಕೊಂಡಿದ್ದಾರೆ. ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ, ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ? ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯತ್ವ ಇರಬೇಕು ಎಂದು ಅನಂತ್‌ ಕುಮಾರ್ ಹೆಗಡೆ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ..

ಲೋಕಸಭೆ ಎಲೆಕ್ಷನ್‌ಗಾಗಿ ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

ಮೋದಿ ಕರೆಗೆ ಓಗೊಟ್ಟು ದೇವಸ್ಥಾನ ಕ್ಲೀನ್ ಮಾಡಿದ ನಟ ಜಗ್ಗೇಶ್..

‘ನಾನು ಮೋದಿ ವಿರೋಧಿ ಎಂದು 3 ಪಕ್ಷಗಳು ನನಗೆ ಟಿಕೇಟ್ ಕೊಡಲು ಮುಂದಾಗಿದೆ. ಆದರೆ…’

- Advertisement -

Latest Posts

Don't Miss