ಕಲಬುರಗಿ: ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ನಿನ್ನೆ ಯಶಸ್ವಿಯಾಗಿ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ನಡೆಸಿದ್ದ ಸಿಎಂಗೆ ಇಂದು ವರುಣನ ಅಡ್ಡಗಾಲು ಹಾಕಿದ್ದಾನೆ. ಮಳೆಯಿಂದಾಗಿ ಕಲಬುರಗಿಯಲ್ಲಿ ಇಂದು ನಡೆಯಬೇಕಿದ್ದ ಕಾರ್ಯಕ್ರಮಗಳು ರದ್ದಾಗಿದ್ದು, ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ, ‘ಕಲಬುರ್ಗಿಯ ಹೇರೂರು ಬಿ ಗ್ರಾಮದಲ್ಲಿ ಇಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಮುಂದೂಡವೇಕಾಗಿ ಬಂದದ್ದು ನನಗೆ ತೀವ್ರ ನಿರಾಸೆ ಉಂಟುಮಾಡಿದೆ. ಆದರೆ ಅದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಮಳೆಯಾಗುತ್ತಿರುವದು ನನಗೆ ತುಂಬಾ ಸಂತೋಷ ಕೊಟ್ಟಿದೆ. ಸದ್ಯದಲ್ಲೇ ಭೇಟಿಯಾಗೋಣ’ ಅಂತ ತಿಳಿಸಿದ್ದಾರೆ. ಹೇರೂರು ಬಿ ಗ್ರಾಮದಲ್ಲಿ ಮತ್ತೊಂದು ದಿನಾಂಕ ನಿಗದಿ ಮಾಡಿ ಸಿಎಂ ಗ್ರಾಮವಾಸ್ತವ್ಯ ಕೈಗೊಳ್ಳಲಿದ್ದಾರೆ.
ಯಾದಗಿರಿಗೆ ಸಿಎಂ ಕುಮಾರಸ್ವಾಮಿ ಕೊಟ್ಟ ಬಂಪರ್ ಆಫರ್ ಏನು ಗೊತ್ತಾ..?ಮಿಸ್ ಮಾಡದೇ ಈ ವಿಡಿಯೋ ನೋಡಿ