www.karnatakatv.net: ಗಡಿ ಜಿಲ್ಲೆ ಬೆಳಗಾವಿ ಸೇರಿ ರಾಜ್ಯಾದ್ಯಂತ ಮಳೆಯ ಆರ್ಭಟ ಹೆಚ್ಚಿರುವುದರಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಎಂ.ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ದಕ್ಷಿಣ ಮಹಾರಾಷ್ಟ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿರುವ ಹಿನ್ನೆಲೆಯಲ್ಲಿ ನದಿ, ಹಳ್ಳ, ಕೊಳ್ಳಗಳು ಭರ್ತಿಯಾಗಿ ಸಮೀಪದ ಪ್ರದೇಶಗಳಲ್ಲೂ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ನೆರೆ ಹಾನಿಗೊಳಗಾಗಿರುವ ಜಿಲ್ಲೆಗಳ ಪರಿಸ್ಥಿತಿ ಅವಲೋಕನ ಮಾಡಿದರು.ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ರಾಜ್ಯದ 12 ಜಿಲ್ಲೆಗಳ ಜಿಲ್ಲಾಧಿಕಾರಿ ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಪ್ರವಾಹ ಪರಿಸ್ಥಿತಿ ನಿರ್ವಹಿಸಲು ಸರಕಾರದಿಂದ ಎಲ್ಲ ನೆರವು ನೀಡುವ ಭರವಸೆ ನೀಡಿದರು.
ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಮಧ್ಯಾಹ್ನ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಮಳೆಯಿಂದ ಆಗಿರುವ ಹಾನಿ, ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತಂತೆ ಮಾಹಿತಿ ಪಡೆದು, ಸಲಹೆ ಸೂಚನೆ ನೀಡುವ ದೃಷ್ಟಿಯಿಂದ ಈ ಸಭೆ ನಡೆಯಿತು. ಮಳೆಯಿಂದ ಆಗಿರುವ ಹಾನಿ, ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸರಕಾರದಿಂದ ನೆರವಿನ ಭರವಸೆ ನೀಡಿದರು.
ವಿಡಿಯೋ ಸಂವಾದದಲ್ಲಿ ಬೆಳಗಾವಿ ಜಿಲ್ಲೆಯಿಂದ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಶ್ವಾಸ್, ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಮತ್ತಿತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ನೆರೆ ಪೀಡಿತ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಬಳ್ಳಾರಿ, ವಿಜಯಪುರ, ಕೊಪ್ಪಳ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.