- Advertisement -
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ 4ನೇ ಶನಿವಾರವೂ ರಜೆ ಘೋಷಣೆಗೆ ಸರ್ಕಾರ ನಿರ್ಧರಿಸಿದ್ದು ಕೆಲವೇ ದಿನಗಳಲ್ಲಿ ಆದೇಶ ಹೊರಬೀಳಲಿದೆ.
ರಾಜ್ಯ ಸರ್ಕಾರಿ ನೌಕರರ ಕಾರ್ಯಕ್ಷಮತೆ ಹೆಚ್ಚಿಸಿ ಒತ್ತಡವನ್ನು ಕಡಿಮೆ ಮಾಡಲು 6ನೇ ವೇತನ ಆಯೋಗ ಮಾಡಿದ್ದ ಶಿಫಾರಸ್ಸಿನಂತೆ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ಘೋಷಿಸಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು ಶೀಘ್ರವೇ ಈ ಕುರಿತು ಸರ್ಕಾರ ಆದೇಶ ಹೊರಡಿಸಲಿದೆ.
ಇನ್ನು ಕನಕ ಜಯಂತಿ , ಬಸವ ಜಯಂತಿ, ವಾಲ್ಮೀಕಿ ಜಯಂತಿ ಸೇರಿದಂತೆ ಸರ್ಕಾರ ಆಚರಿಸೋ ಎಲ್ಲಾ ಜಯಂತಿಗಳಂದೂ ಸಹ ರಾಜ್ಯ ಸರ್ಕಾರಿ ನೌಕರರಿಗೆ ರಜೆ ಮುಂದುವರಿಸಲಾಗುತ್ತೆ.
ಪೊಲೀಸ್ ಆಗಬೇಕೆನ್ನೋವ್ರಿಗೆ ಇಲ್ಲಿದೆ ಗುಡ್ ನ್ಯೂಸ್…!! ಇಲಾಖೆಯಲ್ಲಿ ಖಾಲಿ ಇದೆ 2062 ಹುದ್ದೆ…!ಮಿಸ್ ಮಾಡದೇ ಈ ವಿಡಿಯೋ ನೋಡಿ
- Advertisement -