Thursday, June 19, 2025

Latest Posts

ಕೊಬ್ಬರಿಗೆ ಬೆಲೆ ಏರಿಕೆ: ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಮಾಜಿ ಸಿಎಂ ಕುಮಾರಸ್ವಾಮಿ

- Advertisement -

Political News: ಮಿಲ್ಲಿಂಗ್ ಕೊಬ್ಬರಿಗೆ 300 ರೂ. ಮತ್ತು ಉಂಡೆ ಕೊಬ್ಬರಿಗೆ 250 ರೂ. ಏರಿಕೆಯಾಗಿರುವ ಹಿನ್ನೆಲೆ, ಮಾಜಿ ಸಿಎಂ ಕುಮಾರಸ್ವಾಮಿ ಅವರು, ಪ್ರಧಾನಿ ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ.

ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು. ಮಿಲ್ಲಿಂಗ್‌ ಕೊಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ. (ಪ್ರತಿ ಕ್ವಿಂಟಾಲ್‌ಗೆ) ಏರಿಕೆ ಮಾಡಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ.

ಡಿಸೆಂಬರ್ 21ರಂದು ನವದೆಹಲಿಯಲ್ಲಿ ಮಾಜಿ ಪ್ರಧಾನಿಗಳಾದ ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರ ಅವರ ನೇತೃತ್ವದಲ್ಲಿ ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೊಬರಿ ರೈತರ ಸಂಕಷ್ಟ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಮಾನ್ಯ ಪ್ರಧಾನಿಗಳು ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದರು.

ತೆಂಗು ಬೆಳೆಗಾರರು ಬಹಳಷ್ಟು ಸಂಕಷ್ಟದಲ್ಲಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ನೆರವು ಬೇಕಿದೆ. ಮಧ್ಯವರ್ತಿಗಳು ಅವರನ್ನು ಕಿತ್ತು ತಿನ್ನುತ್ತಿದ್ದಾರೆ. ಇದು ಎಲ್ಲೆಡೆ ಕಂಡು ಬರುತ್ತಿರುವ ನೈಜ ಚಿತ್ರಣ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ನಾಫೆಡ್ ಮೂಲಕವೇ ಕೊನೆಪಕ್ಷ ರಾಜ್ಯದಲ್ಲಿ 1.5 ಲಕ್ಷ ಮೆಟ್ರಿಕ್ ಟನ್ ಕೊಬರಿ ಖರೀದಿಸಬೇಕು ಎಂದು ಕೇಂದ್ರವನ್ನು, ಮಾನ್ಯ ಪ್ರಧಾನಿಗಳಲ್ಲಿ ವಿನಂತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಇಂಗ್ಲೀಷ್ ಜೊತೆಗೆ ಕನ್ನಡದಲ್ಲಿ ನಾಮಫಲಕ ಹಾಕಿದರೆ ಏನು ತೊಂದರೆ? ಇದು ಬ್ರಿಟನ್ ಅಥವಾ ಇಂಗ್ಲೆಂಡ್ ಅಲ್ಲ’

‘ಕನ್ನಡ ನಾಮಫಲಕ ಹಾಕುವ ಬಗ್ಗೆ ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿಯವರೆಗೂ ಶಾಂತಿಯುತವಾಗಿರಿ’

‘ಬಿಜೆಪಿಗರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ..?’

- Advertisement -

Latest Posts

Don't Miss