Monday, April 14, 2025

Latest Posts

Collage Student : ಮಧ್ಯಾಹ್ನ ಊಟ ಮುಗಿಸಿ ಹಾಸ್ಟೆಲ್ ಸೇರಿದ ತುಮಕೂರು ಕಾಲೇಜು ವಿದ್ಯಾರ್ಥಿನಿ ನಿಗೂಢ ಸಾವು

- Advertisement -

Tumukuru News : ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.

ಬನಸಿರಿ‌ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಶಿವಪುರ ಗ್ರಾಮದ ನಿವಾಸಿ. ತುಮಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ತೃತೀಯ ಸೆಮಿಸ್ಟರ್ ಟೆಲಿಕಾಂ ಇಂಜಿನಿಯರಿಂಗ್ ಓದುತ್ತಿದ್ದಳು.

ಬನಸಿರಿ ಕಾಲೇಜಿನ ಆವರಣದಲ್ಲಿರುವ ಹುಡುಗಿಯರ ಹಾಸ್ಟೆಲ್ನ 101 ಬಿ ಕೊಠಡಿಯಲ್ಲಿ ತಂಗಿದ್ದಳು. ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಊಟ ಮುಗಿಸಿಕೊಂಡು ಬಂದ ಬಳಿಕ ಬನಸಿರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಈ ಪ್ರಕರಣ ಇದೀಗ ನಿಗೂಢವಾಗಿದೆ.

ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ತಿಲಕ್ ಪಾರ್ಕ್ ಪೊಲೀಸರು ಹಾಗೂ ತುಮಕೂರು ಡಿವೈಎಸ್ಪಿ ಚಂದ್ರಶೇಖರ್ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ತಿಲಕ್ ಪಾರ್ಕ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Lakshmi Hebbalkar : ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರು! ಇಕ್ಕಟ್ಟಿಗೆ ಸಿಲುಕಿತಾ ಕಾಂಗ್ರೆಸ್ ಸರ್ಕಾರ?

Data Entry : 5980 ಡೇಟಾ ಎಂಟ್ರಿ ಆಪರೇಟ್ ನೇಮಕ; ಸರ್ಕಾರ ಸೂಚನೆ

IAS Officer : ಅರ್ಚಕರಿಗೆ ತನ್ನ ಕುರ್ಚಿಯಲ್ಲಿ ಕೂಡಿಸಿ, ಸನ್ಮಾನ ಮಾಡಿದ ದಿಲ್ಲಿಯ ಐಎಎಸ್ (IAS) ಅಧಿಕಾರಿ!

- Advertisement -

Latest Posts

Don't Miss